ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಮುಳುಗಡೆಯಾಗಿರುವ ಸಿರಿಯಾ ದೇಶದ ಹಡಗಿನ ತೆರವಿಗೆ ಅಗತ್ಯ ಕ್ರಮ; ಡಿಸಿ

ಮಂಗಳೂರು: ನಗರದ ಉಳ್ಳಾಲದ ಬಟ್ಟಂಪಾಡಿ ಸಮುದ್ರ ತೀರದಲ್ಲಿ 5.2ನಾಟಿಕಲ್ ದೂರದಲ್ಲಿ ಭಾಗಶಃ ಮುಳುಗಡೆಯಾಗಿರುವ ಸಿರಿಯಾ ದೇಶದ ಎಂವಿ ಪ್ರಿನ್ಸೆಸ್ ಮಿರಾಲ್ ಹಡಗಿನಲ್ಲಿ ಇದುವರೆಗೆ ಯಾವುದೇ ರೀತಿಯ ತೈಲ ಸೋರಿಕೆ ಕಂಡು ಬಂದಿದಿಲ್ಲ. ಕರಾವಳಿ ರಕ್ಷಣಾ ಪಡೆಗೆ ಸೇರಿರುವ ಮೂರು ವಿಶೇಷ ನೌಕೆ ಅಲ್ಲದೆ ಡೋರ್ನಿಯರ್ ವಿಮಾನದ ಮೂಲಕವೂ ಈ ಬಗ್ಗೆ ನಿರಂತರ ಸಮೀಕ್ಷೆ ನಡೆಸಲಾಗುತ್ತಿದೆ. ತೈಲ ಸೋರಿಕೆಯಾದಲ್ಲಿ ಅಗತ್ಯ ಪರಿಕರಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಿಕೊಳ್ಳಲಾಗಿದೆ.

ನೌಕಾಯಾನ ಇಲಾಖೆಯ ಮಹಾನಿರ್ದೇಶಕರು, ಕರಾವಳಿ ಕಾವಲು ಪಡೆಯ ಕೇಂದ್ರ ಕಚೇರಿ ಹಾಗೂ ಪಶ್ಚಿಮ ಕಚೇರಿಗಳು, ಜಿಲ್ಲಾಧಿಕಾರಿ ಕಚೇರಿ, ಎಂಎಂಡಿ ಇಲಾಖೆಯ ಅಧಿಕಾರಿಗಳು, ನವಮಂಗಳೂರು ಬಂದರು ಪ್ರಾಧಿಕಾರ, ಸಂಬಂಧಿಸಿದರು ಹಾಗೂ ಹಡಗಿನ ಮಾಲಕರೊಂದಿಗೆ ಈ ಸಮಸ್ಯೆಯನ್ನು ಬಗೆಹರಿಸಲು ಕೈಗೊಳ್ಳಬೇಕಾದ ವಿಶೇಷ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ. ಹಡಗಿನ ತೆರವಿಗೆ ಏಜೆನ್ಸಿಗಳನ್ನು ನಿಯೋಜಿಸುವ ಬಗ್ಗೆ ನೌಕಾಯಾನ ಇಲಾಖೆಯ ಮಹಾನಿರ್ದೇಶಕರು ಕ್ರಮವಹಿಸಲಿದ್ದಾರೆ. ಈ ಸಂದರ್ಭ ವಹಿಸಬೇಕಾದ ವಿಶೇಷ ಕ್ರಮಗಳ ಬಗ್ಗೆ ತಾಂತ್ರಿಕ ಪರಿಣತರು ಜಿಲ್ಲಾಡಳಿತಕ್ಕೆ ಮಾರ್ಗದರ್ಶನ ನೀಡುತ್ತಿದೆ. ಅದರಂತೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಹಡಗಿಗೆ ಸಂಬಂಧಿತ ವಿಷಯ ಹಾಗೂ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು ನೌಕಾಯಾನ ಇಲಾಖೆಯ ಮಹಾನಿರ್ದೇಶಕರು, ಕರಾವಳಿ ರಕ್ಷಣಾ ಪಡೆ, ಎನ್‌ಎಂಪಿಎ, ಎಂಆರ್‌ಪಿಎಲ್ ಸೇರಿದಂತೆ ಜಿಲ್ಲಾಡಳಿತ ಹಾಗೂ ಸಂಬಂಧಿಸಿದ ಇಲಾಖೆಗಳು ಪ್ರತಿದಿನ ಸಂಜೆ 5 ಗಂಟೆಗೆ ವರ್ಚುವಲ್ ಮಾಧ್ಯಮದ ಮೂಲಕ ಸಭೆ ನಡೆಸಲಾಗುತ್ತಿದೆ, ಪರಿಸ್ಥಿತಿಗೆ ತಕ್ಕಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

29/06/2022 10:49 pm

Cinque Terre

6.58 K

Cinque Terre

0