ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಜಿಲ್ಲಾ ವಿಪತ್ತು ನಿರ್ವಹಣಾ ಕಂಟ್ರೋಲ್ ರೂಂ 24 ಗಂಟೆಯೂ ಕಾರ್ಯನಿರ್ವಹಿಸಬೇಕು; ಮನೋಜ್ ಜೈನ್

ಉಡುಪಿ: ಜಿಲ್ಲೆಯಲ್ಲಿ ಕಳೆದ 3 ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹೀಗೆ ಮುಂದುವರಿದಲ್ಲಿ ಅತಿವೃಷ್ಠಿ ಉಂಟಾಗಿ ಸಮಸ್ಯೆಗಳಾಗುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಜಿಲ್ಲಾಡಳಿತ ಸನ್ನದ್ದರಾಗಿರಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್ ಸೂಚನೆ ನೀಡಿದ್ದಾರೆ.

ಗುರುವಾರ ವರ್ಚುವಲ್ ಮೀಟಿಂಗ್ ಮೂಲಕ ನಡೆದ ಜಿಲ್ಲೆಯ ಮಳೆ ಪರಿಸ್ಥಿತಿ ಹಾಗೂ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಅವರು ಮಾತನಾಡಿದರು.

ನಿರಂತರ ಮಳೆಯಿಂದಾಗಿ ನದಿ ಹಳ್ಳ ಕೊಳ್ಳಗಳು ತುಂಬಿ ಹರಿದು ತಗ್ಗು ಪ್ರದೇಶಗಳಿಗೆ ನುಗ್ಗುವ ಸಾಧ್ಯತೆಗಳು ಇರುತ್ತವೆ. ಇಂತಹ ಪ್ರದೇಶಗಳನ್ನು ಈಗಾಗಲೇ ಗುರ್ತಿಸಿದ್ದು, ಅಲ್ಲಿ ವಾಸಿಸುವ ಜನರಿಗೆ ರಕ್ಷಣೆ ಮತ್ತು ಸ್ಥಳಾಂತರಕ್ಕೆ ಕಾಳಜಿ ಕೇಂದ್ರಗಳನ್ನು ಗುರುತಿಸಿ ಸಿದ್ಧವಾಗಿಟ್ಟುಕೊಳ್ಳಬೇಕೆಂದು ಅವರು ಸೂಚನೆ ನೀಡಿದರು.

ಗಾಳಿ-ಮಳೆಯಿಂದಾಗಿ ರಸ್ತೆಗಳಲ್ಲಿ ಮರಗಳು ಬಿದ್ದು ಸಂಚಾರ ಅಸ್ತವ್ಯಸ್ತ ವಾಗದಂತೆ ಕ್ರಮ ವಹಿಸಲು ಅಗತ್ಯ ಪರಿಕರಗಳೊಂದಿಗೆ ಅರಣ್ಯ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಸಿದ್ಧರಿರಬೇಕು. ತಗ್ಗುಪ್ರದೇಶದಲ್ಲಿರುವ ಸೇತುವೆಗಳು ಮುಳುಗಡೆಗೊಂಡ ಸಂದರ್ಭದಲ್ಲಿ ಸಂಚಾರ ವ್ಯವಸ್ಥೆಯನ್ನು ಸ್ಥಗಿತಗೊಳಿಸುವ ಕಾರ್ಯವನ್ನು ಪೊಲೀಸ್ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ನಿರ್ವಹಿಸಬೇಕು ಎಂದರು.

ಮಳೆಯಿಂದಾಗಿ ಮನೆ, ಜಾನುವಾರು, ಆಸ್ತಿ ಸೇರಿದಂತೆ ಇತರ ಹಾನಿಗಳಿಗೆ ನಷ್ಟ ಪರಿಹಾರವನ್ನು ಎನ್‌ಡಿಆರ್‌ಎಫ್ ನಿಯಮಾವಳಿಯಂತೆ ಶೀಘ್ರದಲ್ಲಿಯೇ ತಲುಪಿಸಬೇಕು.ಕಿಂಡಿ ಅಣೆಕಟ್ಟುಗಳ ಹಲಗೆಗಳನ್ನು ಪೂರ್ಣ ಪ್ರಮಾಣದಲ್ಲಿ ತೆರವುಗೊಳಿಸಿ ನೀರು ಸರಾಗವಾಗಿ ಹರಿಯುವಂತೆ ಕ್ರಮ ವಹಿಸಬೇಕು. ಜಿಲ್ಲಾ ವಿಪತ್ತು ನಿರ್ವಹಣಾ ಕಂಟ್ರೋಲ್ ರೂಂ 24 ಗಂಟೆಯೂ ಕಾರ್ಯ ನಿರ್ವಹಿಸುವುದರೊಂದಿಗೆ ತುರ್ತು ಕರೆಗಳು ಬಂದಾಗ ತಕ್ಷಣ ಸ್ಪಂದಿಸಬೇಕು ಎಂದರು.

ಜಿಲ್ಲೆಯಲ್ಲಿ ಉತ್ತಮ ಮಳೆ ಆಗುತ್ತಿರುವ ಹಿನ್ನಲೆಯಲ್ಲಿ ಕೃಷಿ ಚಟುವಟಿಕೆಗಳು ಭರದಿಂದ ಸಾಗುತ್ತಿದ್ದು, ರೈತರಿಗೆ ಅಗತ್ಯವಿರುವ ಭಿತ್ತನೆ ಬೀಜ, ರಸಗೊಬ್ಬರಗಳ ವಿತರಣೆಯನ್ನು ಸಮರ್ಪಕವಾಗಿ ಮಾಡಬೇಕೆಂದು ಸೂಚಿಸಿದರು.

Edited By : PublicNext Desk
Kshetra Samachara

Kshetra Samachara

01/07/2022 02:57 pm

Cinque Terre

2.9 K

Cinque Terre

0

ಸಂಬಂಧಿತ ಸುದ್ದಿ