ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಅಕ್ರಮ ಗೋಹತ್ಯೆ ಕೇಸ್‌ನಲ್ಲಿ ಮೊದಲ ಆಸ್ತಿ ಮುಟ್ಟುಗೋಲಿಗೆ ನೋಟೀಸ್ ಜಾರಿ

ಮಂಗಳೂರು: ನಗರದ ಅಡ್ಯಾರ್‌ನ ಅರ್ಕುಳ ಕೋಟೆ ಎಂಬಲ್ಲಿ ಅಕ್ರಮ ಗೋಹತ್ಯೆ ಮಾಡಿ ಮಾಂಸ ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಆರೋಪಿ ಬಾತೀಶ್ ಎಂಬಾತನ ಆಸ್ತಿ ಮುಟ್ಟುಗೋಲು ಹಾಕುವ ಬಗ್ಗೆ ಮಂಗಳೂರು ವಿಭಾಗ ಸಹಾಯಕ ಆಯುಕ್ತರು ನೋಟೀಸ್ ಜಾರಿಗೊಳಿಸಿದ್ದಾರೆ.

ಅಕ್ರಮ ಗೋ ಹತ್ಯೆ ಪ್ರಕರಣಗಳನ್ನು ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆ 2020ರನ್ವಯ ಕ್ರಮ ಕೈಗೊಳ್ಳುವಂತೆ ಶಾಸಕ ಡಾ.ಭರತ್ ಶೆಟ್ಟಿ ವೈ. ಯವರ ಸೂಚನೆಯ ಮೇರೆಗೆ ಇದೀಗ ಪೊಲೀಸ್ ಇಲಾಖೆ ಹಾಗೂ ಕಂದಾಯ ಇಲಾಖೆ ಕಾರ್ಯಪ್ರವೃತ್ತವಾಗಿದ್ದು, ಗೋಹತ್ಯೆ ಪ್ರಕರಣದಲ್ಲಿ ಮೊದಲ ಆಸ್ತಿ ಮುಟ್ಟುಗೋಲಿಗೆ ನೋಟಿಸ್ ಜಾರಿಗೊಳಿಸಿದೆ.

ಆರೋಪಿ ಬಾತಿಶ್ ಅಕ್ರಮವಾಗಿ ಜಾನುವಾರುಗಳನ್ನು ಕಡಿದು ಮಾಂಸ ಮಾಡಿ ಮಾರಾಟ ಮಾಡುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಜುಲೈ 3ರಂದು ಕಂಕನಾಡಿ ಗ್ರಾಮಾಂತರ ಠಾಣೆಯ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ 95ಕೆಜಿ ಜಾನುವಾರು ಮಾಂಸ, ತೂಕದ ಯಂತ್ರಗಳು, ಕತ್ತಿ, ಮರದ ದಿಮ್ಮಿ, ಪ್ಲಾಸ್ಟಿಕ್ ಸಾಮಾಗ್ರಿಗಳು, ಕಬ್ಬಿಣದ ಕೊಕ್ಕೆಗಳನ್ನು ವಶಪಡಿಸಿಕೊಂಡಿದ್ದರು. ಈತ ಎ.ಕೆ.ಖಾಲಿದ್ ಎಂಬವರ ಮನೆಗೆ ಹೊಂದಿಕೊಂಡಿರುವ ಶೆಡ್ ನಲ್ಲಿ ಅಕ್ರಮವಾಗಿ ದನದ ಮಾಂಸ ಮಾಡಿ ಮಾರಾಟ ಮಾಡುತ್ತಿದ್ದ. ದಾಳಿ ವೇಳೆ ಆರೋಪಿ ಪರಾರಿಯಾಗಿದ್ದ.

ಆರೋಪಿ ಬಾತೀಶ್ ಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಜಾರಿ ಮಾಡಲಾಗಿದೆ. ಜು.12 ರಂದು ಮಧ್ಯಾಹ್ನ 3ಗಂಟೆಗೆ ಸಹಾಯಕ ಆಯುಕ್ತರ ನ್ಯಾಯಲಯದಲ್ಲಿ ವಿಚಾರಣೆ ನಡೆಯಲಿದೆ. ಈತ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಕಡಿದು ಮಾರಾಟ ಮಾಡಿರುವ ಸ್ಥಳ, ಶೆಡ್, ಕತ್ತಿ, ತೂಕಯಂತ್ರಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಹಾಗೂ ಸೊತ್ತು ಮೌಲ್ಯಮಾಪನ ಮಾಡಿ ವರದಿ ಸಲ್ಲಿಕೆಗೆ ಆದೇಶ ನೀಡಲಾಗಿದೆ.

Edited By : Vijay Kumar
Kshetra Samachara

Kshetra Samachara

08/07/2022 04:29 pm

Cinque Terre

3.89 K

Cinque Terre

0