ಉಡುಪಿ: ಜಿಲ್ಲೆಯಲ್ಲಿ ಜುಲೈ 10ರಂದು ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆಯನ್ನು ನಿಷೇಧಿಸಲಾಗಿದ್ದು, ಗೋಹತ್ಯೆ ನಿಷೇಧ ಕಾಯ್ದೆಯಡಿ ವಿವಿಧ ತಂಡಗಳನ್ನು ರಚಿಸಿ, ಕಣ್ಗಾವಲು ಇರಿಸುವಂತೆ ಸಂಬಂಧಪಟ್ಟ ಇಲಾಖೆಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚಿಸಿದ್ದಾರೆ.
ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯಲ್ಲಿ, ಬಕ್ರೀದ್ ಆಚರಣೆ ಸಂದರ್ಭದಲ್ಲಿ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆಯನ್ನು ತಡೆಗಟ್ಟಲು ರಚಿಸಿರುವ ಜಿಲ್ಲಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಜಿಲ್ಲೆಯಾದ್ಯಂತ ಇರುವ ಚೆಕ್‌ಪೋಸ್ಟ್‌ಗಳಲ್ಲಿ ಅನಧಿಕೃತವಾಗಿ ಜಾನುವಾರುಗಳ ಸಾಗಾಣಿಕೆ ಆಗದಂತೆ ನಿಗಾ ಇರಿಸುವಂತೆ ಸೂಚಿಸಿದ ಅವರು, ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ತಿಳಿಸಿದರು.
Kshetra Samachara
09/07/2022 12:06 pm