ಮಂಗಳೂರು: ಬಕ್ರೀದ್ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಪೊಲೀಸ್ ರೂಟ್ ನಡೆಯಿತು.
ನಗರದ ಉಳ್ಳಾಲ, ಸುರತ್ಕಲ್, ಮೂಡುಬಿದಿರೆ ಹಾಗೂ ಬಂದರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರಿಂದ ರೂಟ್ ಮಾರ್ಚ್ ನಡೆಯಿತು. ಈ ರೂಟ್ ಮಾರ್ಚ್ ನಲ್ಲಿ ಪೊಲೀಸ್ ಸಿಬ್ಬಂದಿ, ಕೆಎಸ್‌ಆರ್‌ಪಿ ಸಿಬ್ಬಂದಿ, ಹೋಮ್ ಗಾರ್ಡ್‌ಗಳು ಭಾಗವಹಿಸಿದ್ದರು. ಒಂದೊಂದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲೂ 200-250 ಮಂದಿ ಪೊಲೀಸ್ ಸಿಬ್ಬಂದಿ ರೂಟ್ ಮಾರ್ಚ್‌ನಲ್ಲಿ ಪಾಲ್ಗೊಂಡಿದ್ದರು.
Kshetra Samachara
09/07/2022 09:34 pm