ಬೈಂದೂರು: ಕಾರಿನೊಂದಿಗೆ ವ್ಯಕ್ತಿಯನ್ನು ಸುಟ್ಟು ಕೊಲೆಗೈದ ಪ್ರಕರಣವನ್ನು ಒಂದೇ ದಿನದಲ್ಲಿ ಭೇದಿಸಿದ ಪೊಲೀಸರ ತಂಡಕ್ಕೆ ನಗದು ಬಹುಮಾನ ಘೋಷಿಸಲಾಗಿದೆ.ಪಶ್ಚಿಮ ವಲಯ ಐಜಿಪಿ 50,000 ರೂಗಳ ಬಹುಮಾನ ಘೋಷಿಸಿರುವುದಾಗಿ ಉಡುಪಿ ಜಿಲ್ಲಾ ಎಸ್ಪಿ ಎನ್. ವಿಷ್ಣುವರ್ಧನ್ ತಿಳಿಸಿದ್ದಾರೆ.
ಕಾರಿನೊಂದಿಗೆ ವ್ಯಕ್ತಿಯನ್ನು ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಂಡವನ್ನು ರಚಿಸಿ ಕ್ಷಿಪ್ರವಾಗಿ ಪ್ರಕರಣ ಭೇದಿಸಲಾಗಿದೆ. ಇದಕ್ಕಾಗಿ ಪೊಲೀಸ್ ತಂಡಕ್ಕೆ ಪಶ್ಚಿಮ ವಲಯ ಐಜಿಪಿ ಮೆಚ್ಚುಗೆ ಸೂಚಿಸಿ ,ನಗದು ಬಹುಮಾನ ಘೋಷಿಸಿದ್ದಾರೆ.ಈ ಕೊಲೆ ಪ್ರಕರಣದ ತನಿಖೆ ಮುಂದುವರಿದಿದ್ದು, ಇನ್ನಷ್ಟು ಮಾಹಿತಿ ಕಲೆ ಹಾಕಬೇಕಿದೆ ಎಂದು ಮಾಧ್ಯಮದವರಿಗೆ ತಿಳಿಸಿದರು.
Kshetra Samachara
15/07/2022 02:36 pm