ಉಡುಪಿ: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ವಾಣಿಜ್ಯ ಪರೀಕ್ಷೆಗಳು ಜುಲೈ 18ರಿಂದ 30ರವರೆಗೆ ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ, ದೋಷರಹಿತವಾಗಿ ನಡೆಸಲು ಮತ್ತು ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗದಿಪಡಿಸಿದ ಪರೀಕ್ಷಾ ಕೇಂದ್ರದ 200ಮೀ. ಪ್ರದೇಶದ ಸುತ್ತಲೂ ನಿಷೇಧಿತ ಪ್ರದೇಶವೆಂದು ಘೋಷಿಸಿ, 144(1)ರಂತೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶ ಹೊರಡಿಸಿದ್ದಾರೆ.
PublicNext
15/07/2022 08:05 pm