ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಮಳಲಿ ಮಸೀದಿ ಆಡಳಿತ ಮಂಡಳಿ ದಾವೆ ಪ್ರಶ್ನಿಸಿದ್ದ ಅರ್ಜಿ ಹೈಕೋರ್ಟ್ ನಲ್ಲಿ ವಜಾ

ಮಂಗಳೂರು: ನಗರದ ಮಳಲಿ ಮಸೀದಿ ನವೀಕರಣ ತಡೆ ವಿವಾದದ ಕುರಿತು ಮೂಲ ದಾವೆಯ ಸಿಂಧುತ್ವದ ಕುರಿತು ವಿಚಾರಣೆ ನಡೆಸುತ್ತಿರುವ ಮಂಗಳೂರಿನ ಸಿವಿಲ್ ನ್ಯಾಯಾಲಯದ ಕ್ರಮವನ್ನು ಪ್ರಶ್ನಿಸಿದ್ದ ಅರ್ಜಿಯನ್ನು ರಾಜ್ಯ ಹೈಕೋರ್ಟ್ ಇಂದು ವಜಾ ಮಾಡಿದೆ.

ಮಂಗಳೂರಿನ ಧನಂಜಯ್ ಹಾಗೂ ಮನೋಜ್ ಕುಮಾರ್ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜೂನ್ 24ರಂದು ನಡೆಸಿ ತೀರ್ಪು ಕಾಯ್ದಿರಿಸಲಾಗಿತ್ತು. ಆದರೆ ಇಂದು ನ್ಯಾಯಮೂರ್ತಿ ಸಚಿನ್ ಶಂಕರ್ ಅವರ ಪೀಠವು ಅರ್ಜಿಯನ್ನು ವಜಾಗೊಳಿಸಿದೆ.

ಅರ್ಜಿದಾರರ ಪರ ವಾದದ ವಕೀಲ ವಿವೇಕ್ ಸುಬ್ಬಾರೆಡ್ಡಿ 'ಮಸೀದಿಯೊಳಗೆ ದೇವಸ್ಥಾನ ಇತ್ತೋ ಇಲ್ಲವೋ ಎಂಬುದರ ಕುರಿತು ಸಾಕ್ಷ್ಯಾಧಾರಗಳನ್ನು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿ ಸಂಗ್ರಹಿಸಬೇಕಾಗಿದೆ. ಈ ಕಾರ್ಯವನ್ನು ಬೇರೆಯವರು ಮಾಡಲು ಸಾಧ್ಯವಿಲ್ಲ. ವೈಜ್ಞಾನಿಕ ತಂತ್ರಜ್ಞಾನಗಳ ಮೂಲಕ ಮಾತ್ರ ಸಾಧ್ಯವಿದೆ. ಆದ್ದರಿಂದ ಮಳಲಿ ಮಸೀದಿ ಪರಿಶೀಲನೆಗೆ ಆಯುಕ್ತರ‌ ನೇಮಕವಾಗುವ ಅವಶ್ಯಕತೆಯಿದೆ' ಎಂದು ವಾದಿಸಿದ್ದರು‌.

ಮಸೀದಿ ಅಧ್ಯಕ್ಷರ ಪರ ವಾದಿಸಿರುವ ವಕೀಲ ಜಯಕುಮಾರ್ ಪಾಟೀಲ್ ಅವರು ವಾದ ಮಂಡನೆ ಮಾಡಿ, 'ಮೂಲ ದಾವೆಯನ್ನು ಆಲಿಸಲು ವಿಚಾರಣಾಧೀನ ನ್ಯಾಯಾಲಯದ ಅಧಿಕಾರ ವ್ಯಾಪ್ತಿ ನಿರ್ಧಾರವಾಗುವ ಮೊದಲು ಆಯುಕ್ತರ ವರದಿಯ ಅಗತ್ಯವಿಲ್ಲ. ಒಂದು ವೇಳೆ ಮೊದಲು ಆಯುಕ್ತರನ್ನು ನೇಮಿಸಿ ವರದಿ ಬಂದ ಬಳಿಕ ದಾವೆಯ ಸಿಂಧುತ್ವದ ಬಗ್ಗೆ ವಿಚಾರಣೆ ನಡೆದು ವ್ಯತಿರಿಕ್ತ ತೀರ್ಪು ಬಂದರೆ, ಕಮಿಷನರ್ ನೇಮಕ ಮತ್ತವರ ವರದಿ ಎರಡಕ್ಕೂ ಮಾನ್ಯತೆ ಇರೋದಿಲ್ಲ. ಆದ್ದರಿಂದ ಮೊದಲು ಮೂಲ ದಾವೆಯ ಸಿಂಧುತ್ವ ನಿರ್ಧಾರವಾಗಬೇಕು' ಎಂದು ವಾದಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

15/07/2022 09:36 pm

Cinque Terre

13.76 K

Cinque Terre

0

ಸಂಬಂಧಿತ ಸುದ್ದಿ