ಮಂಗಳೂರು: ಉದ್ರೇಕಕಾರಿ ಭಾಷಣ ಮಾಡಿ ಜಿಲ್ಲೆಯಲ್ಲಿ ಮತ್ತೆ ಪ್ರಕ್ಷಬ್ಧ ವಾತಾವರಣ ಸೃಷ್ಟಿ ಮಾಡುವ ಸಾಧ್ಯತೆ ಇರುವುದರಿಂದ ಶ್ರೀರಾಮಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ದ.ಕ.ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯೊಳಗೆ ಪ್ರವೇಶಿಸುವುದಕ್ಕೆ ನಿರ್ಬಂಧ ವಿಧಿಸಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ಜುಲೈ 26ರಂದು ರಾತ್ರಿ 8.30 ವೇಳೆಗೆ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಈ ಪ್ರಕರಣದಲ್ಲಿ ಈಗಾಗಲೇ ಉದ್ವಿಗ್ನ ಸ್ಥಿತಿ ನಿರ್ಮಾಣಗೊಂಡಿದೆ. ಈಗಾಗಲೇ ಪ್ರಕ್ಷುಬ್ಧ ವಾತಾವರಣ ಇರುವ ಬೆಳ್ಳಾರೆ ಹಾಗೂ ಮೃತ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡುವುದಾಗಿ ತಿಳಿದು ಬಂದಿರುತ್ತದೆ.
ಅವರು ಈ ಸಮಯದಲ್ಲಿ ಬಂದು ಉದ್ರೇಕಕಾರಿ, ಪ್ರಚೋದನಾಕಾರಿ ಭಾಷಣ ಮಾಡಿ ಮತ್ತೆ ಪ್ರಕ್ಷುಬ್ಧ ವಾತಾವರಣ ಸೃಷ್ಟಿ ಮಾಡುತ್ತಾರೆ. ಇದರಿಂದ ಕೋಮು ಸೌಹಾರ್ದಕ್ಕೆ ಹದಗೆಟ್ಟು ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಸಾಧ್ಯತೆಗಳಿರುತ್ತದೆ. ಆದ್ದರಿಂದ ಅವರು ದ.ಕ.ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯನ್ನು ಪ್ರವೇಶಿಸುವುದನ್ನು ನಿರ್ಬಂಧಿಸಿ ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ.
Kshetra Samachara
28/07/2022 08:22 pm