ಉಡುಪಿ: ಕರಾವಳಿ ಜಿಲ್ಲೆಯಲ್ಲಿ ಕಳೆದ ಒಂದು ವಾರ ಅಂತರದಲ್ಲಿ ಎರಡು ಕೊಲೆ ನಡೆದಿರುವ ಹಿನ್ನೆಲೆಯಲ್ಲಿ ಸಂಘಟನೆಗಳ ಮುಖ್ಯಸ್ಥರಿಗೆ ಎಚ್ಚರಿಕೆಯಿಂದ ಇರುವಂತೆ ಪೊಲೀಸರು ಸಂದೇಶ ರವಾನಿಸಿದ್ದಾರೆ.
ಬೆಳ್ಳಾರೆಯ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ನಿನ್ನೆ ಸಂಜೆ ಸುರತ್ಕಲ್‌ನಲ್ಲಿ ಇನ್ನೋರ್ವ ಯುವಕನ ಕೊಲೆ ನಡೆದಿರುವ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳ ಪ್ರಮುಖರಿಗೆ ಎಚ್ಚರದಿಂದ ಇರುವಂತೆ ಪೊಲೀಸ್ ಇಲಾಖೆಯಿಂದ ಸಂದೇಶ ರವಾನೆ ಮಾಡಲಾಗಿದೆ.
ಈ ಎರಡೂ ಘಟನೆಗಳಿಂದ ಕರಾವಳಿಯಲ್ಲಿ ಉದಿಗ್ನ ಪರಿಸ್ಥಿತಿ ಉಂಟಾಗಿದೆ.ಪೊಲೀಸ್ ಇಲಾಖೆ ಕೂಡ ವಿಶೇಷ ಕಾರ್ಯಾಚರಣೆ ನಡೆಸುತ್ತಿದೆ. ಹಾಗೆಯೇ ಸಂಘ ಪರಿವಾರ ಸಹಿತ ವಿವಿಧ ಸಂಘಟನೆಗಳ ಪ್ರಮುಖರಿಗೆ ಎಚ್ಚರದಿಂದ ಇರುವಂತೆ ಹಾಗೂ ರಾತ್ರಿ ವೇಳೆಯಲ್ಲಿ ಒಬ್ಬೊಬ್ಬರಾಗಿ ಸುತ್ತಾಡದಂತೆ ಸಲಹೆ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
Kshetra Samachara
29/07/2022 01:35 pm