ಮುಲ್ಕಿ: ಸುರತ್ಕಲ್ ಯುವಕನ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಇಂದು (ಜುಲೈ 29ರಿಂದ) ಸಂಜೆ 6 ಗಂಟೆಯಿಂದ ಬೆಳಗ್ಗೆ 6 ವರೆಗೆ ಅಂಗಡಿ ಮುಗ್ಗಟ್ಟುಗಳು ಬಂದ್ ಮಾಡಬೇಕೆಂಬ ಜಿಲ್ಲಾಧಿಕಾರಿಗಳ ಆದೇಶದ ಹಿನ್ನಲೆಯಲ್ಲಿ ಮುಲ್ಕಿ ತಾಲೂಕು ವ್ಯಾಪ್ತಿಯಲ್ಲಿ ಅಂಗಡಿ ಮುಗ್ಗಟ್ಟುಗಳು ಮುಚ್ಚಲ್ಪಟ್ಟಿದ್ದು ಇನ್ನು ಕೆಲವು ಕಡೆ ಪೊಲೀಸರು ಮುಚ್ಚಿಸಿದ್ದಾರೆ.
ಆದರೆ ಬಸ್‌ಗಳು ಸಹಿತ ಇತರೆ ವಾಹನಗಳು ಎಂದಿನಂತೆ ರಾಷ್ಟ್ರೀಯ ಹೆದ್ದಾರಿ ಹಾಗೂ ಒಳ ರಸ್ತೆಯಲ್ಲಿ ಸಂಚರಿಸಿದ್ದು ಮುಲ್ಕಿ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ. ಅಂಗಡಿ ಮುಗ್ಗಟ್ಟುಗಳು ಹಿನ್ನೆಲೆಯಲ್ಲಿ ಮುಲ್ಕಿ ತಾಲೂಕು ವ್ಯಾಪ್ತಿಯ ಹಳೆಯಂಗಡಿ, ಪಕ್ಷಿಕೆರೆ ,ಕಿನ್ನಿಗೋಳಿ ಪ್ರದೇಶದಲ್ಲಿ ಅಘೋಷಿತ ಬಂದ್ ವಾತಾವರಣ ನಿರ್ಮಾಣವಾಯಿತು.
ಸೆಕ್ಷನ್ 144 ಹಿನ್ನಲೆಯಲ್ಲಿ ಶನಿವಾರ ನಡೆಯಬೇಕಾಗಿದ್ದ 'ಕಾರ್ನಾಡ್ ಸಂತೆ"ರದ್ದಾಗಿದೆ ಎಂದು ಮುಲ್ಕಿ ನಗರ ಪಂಚಾಯತ್ ಮುಖ್ಯಾಧಿಕಾರಿ ಚಂದ್ರ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kshetra Samachara
29/07/2022 09:50 pm