ಕುಂದಾಪುರ: ದ. ಕ. ಜಿಲ್ಲೆಯಲ್ಲಿ ಹತ್ತು ದಿನಗಳಲ್ಲಿ ಮೂರು ಕೊಲೆ ನಡೆದಿರುವ ಹಿನ್ನೆಲೆಯಲ್ಲಿ ಎಡಿಜಿಪಿ ಸೂಚನೆ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್ ನೇತೃತ್ವದಲ್ಲಿ ಉಡುಪಿ ಜಿಲ್ಲೆಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ವಾರಾಂತ್ಯವಾದ ಕಾರಣ ನಿನ್ನೆ ಸಂಜೆ 4ರಿಂದ 8ರವರೆಗೆ ವಿಶೇಷ ಡ್ರೈವ್ ಮಾಡಲಾಯಿತು.
ಜಿಲ್ಲೆಯಲ್ಲಿ 11 ಕಡೆ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಲಾಗಿದ್ದು, 60 ಕಡೆಗಳಲ್ಲಿ ಪಿಕೆಟಿಂಗ್ ಪಾಯಿಂಟ್ ತೆರೆಯಲಾಗಿದೆ.
ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ವಾಹನಗಳ ತಪಾಸಣೆ ನಡೆಯುತ್ತಿದೆ. ಹೆಜಮಾಡಿ, ಸಾಸ್ತಾನ, ಶಿರೂರು ಟೋಲ್‌ಗೇಟ್‌ಗಳಲ್ಲಿ ತಪಾಸಣೆ ಬಿಗಿಗೊಳಿಸಲಾಗಿದೆ.
ಉಳಿದಂತೆ ಜಿಲ್ಲೆಯ ಕೋಮು ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.
PublicNext
30/07/2022 09:44 am