ಮಂಗಳೂರು: ದ.ಕ.ಜಿಲ್ಲೆಯಲ್ಲಿ ನಡೆದಿರುವ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯಲ್ಲಿ ನಾಳೆ ಬೆಳಗ್ಗಿನವರೆಗಿದ್ದ ರಾತ್ರಿ ನಿರ್ಬಂಧ ಮತ್ತೆ ಎರಡು ದಿನ ಕಾಲ ಮುಂದುವರಿದಿದೆ.
ಶುಕ್ರವಾರ ಸಂಜೆಯಿಂದ ಸೋಮವಾರ ಬೆಳಗ್ಗಿನವರೆಗೆ ಸಂಜೆ 6 ರಿಂದ ಬೆಳಗ್ಗೆ 6ವರೆಗೆ ನಿರ್ಬಂಧ ವಿಧಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಈ ನಿರ್ಬಂಧವು ನಾಳೆ ಬೆಳಗ್ಗಿನ ಹೊತ್ತಿಗೆ ಮುಕ್ತಾಯವಾಗಬೇಕಿತ್ತು. ಆದರೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಮತ್ತು ದ.ಕ.ಜಿಲ್ಲಾ ಪೊಲೀಸ್ ವಿನಂತಿ ಮೇರೆಗೆ ಈ ನಿರ್ಬಂಧ ಮತ್ತೆ ಎರಡು ದಿನಗಳ ಕಾಲ ಮುಂದುವರಿಯಲಿದೆ ಎಂದು ದ.ಕ ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ.
Kshetra Samachara
31/07/2022 10:51 pm