ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ತೂರು: ಅಪರಾಧ ಕೃತ್ಯಗಳಲ್ಲಿ ತೊಡಗಿಕೊಳ್ಳುವವರ ವಿರುದ್ಧ ಕಠಿಣ ಕ್ರಮ; ಎಡಿಜಿಪಿ ಎಚ್ಚರಿಕೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ- ಸುವ್ಯವಸ್ಥೆ ಕಾಪಾಡುವಲ್ಲಿ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಜನ ಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಪುತ್ತೂರಿನಲ್ಲಿ ಯಾವುದೇ ಸಮಸ್ಯೆ ಇಲ್ಲ. ಎಲ್ಲಾ ಕಡೆ ನಿಗಾ ವಹಿಸಿದ್ದೇವೆ. ಒಳ್ಳೆಯ ಜನರೊಂದಿಗೆ ಒಳ್ಳೆಯ ರೀತಿಯಲ್ಲಿ ಇರಬೇಕು. ಯಾರು ತರ್ಲೆ ಮಾಡುತ್ತಾರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.

ಜಿಲ್ಲೆಯಲ್ಲಿ ಅಹಿತಕರ ಘಟನೆ ಹಿನ್ನೆಲೆಯಲ್ಲಿ ನಡೆಯುತ್ತಿರುವ ತನಿಖೆ, ಬಂದೋಬಸ್ತ್ ಹಾಗೂ ಶಾಂತಿ ಸುವ್ಯವಸ್ಥೆ ಕುರಿತಂತೆ ಮಂಗಳೂರು ಕಮಿಷನರೇಟ್, ದ.ಕ. ಮತ್ತು ಉಡುಪಿ ಜಿಲ್ಲಾ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಂಗಳೂರಿನಲ್ಲಿ ಮಾಹಿತಿ ಪಡೆದ ಬಳಿಕ ಸುಳ್ಯ, ಬೆಳ್ಳಾರೆ ಪೊಲೀಸ್ ಠಾಣೆಗೆ ಭೇಟಿ ನೀಡಿದರು. ಈ ನಡುವೆ ಪುತ್ತೂರು ನಗರ ಠಾಣೆಗೆ ಭೇಟಿ ನೀಡಿ ಇನ್‌ಸ್ಪೆಕ್ಟರ್‌ ಅವರಿಂದ ಪುತ್ತೂರಿನಲ್ಲಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವವರ ಮಾಹಿತಿ ಪಡೆದರು. ಆ ಬಳಿಕ ಪತ್ರಿಕಾ ಮಾಧ್ಯಮದವರೊಂದಿಗೆ ಮಾತನಾಡಿದರು.

Edited By : Manjunath H D
PublicNext

PublicNext

04/08/2022 08:02 pm

Cinque Terre

34.91 K

Cinque Terre

0