ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಸೋಶಿಯಲ್ ಮೀಡಿಯಾಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ್ರೆ ಹುಷಾರ್: ಎಸ್ಪಿ ವಾರ್ನಿಂಗ್!

ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಒಂದಷ್ಟು ಮಂದಿ ಪ್ರಚೋದನಕಾರಿ ಹೇಳಿಕೆಗಳನ್ನು ಹಾಕುತ್ತಿರುವ ಕುರಿತು ಉಡುಪಿ ಜಿಲ್ಲಾ ಪೊಲೀಸ್ ಅದನ್ನು ಗಂಭೀರವಾಗಿ ಪರಿಗಣಿಸಿದೆ.ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ರೀತಿಯ ಪ್ರಚೋದನಾಕಾರಿ ಸಂದೇಶ ಅಥವಾ ಹೇಳಿಕೆಗಳನ್ನು ಹಾಕಿದಲ್ಲಿ ಅವರ ವಿರುದ್ಧ ಕಾನೂನು ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ವಿಷ್ಣುವರ್ಧನ ಅವರು ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಫೇಸ್ ಬುಕ್, ವಾಟ್ಸಾಪ್, ಟ್ವಿಟ್ಟರ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಕಾನೂನು ಸುವ್ಯವಸ್ಥೆ, ಶಾಂತಿ ಸುವ್ಯವಸ್ಥೆಗೆ, ಕೋಮು ಸೌಹಾರ್ಧತೆಗೆ ಧಕ್ಕೆ ತರುವಂತಹ ಹಾಗೂ ಪರಸ್ಪರ ಗುಂಪಿನ ನಡುವೆ ಧ್ವೇಷ ಭಾವನೆ ಬರುವಂತಹ ಪ್ರಚೋದನಾಕಾರಿ ಹೇಳಿಕೆಗಳನ್ನು ಹಾಕುವವರ, ಫಾರ್ವಾರ್ಡ್ ಮಾಡುವವರ ವಿರುದ್ಧವೂ ಹಾಗೂ ಆಕ್ಷೇಪಾರ್ಹವಾಗಿ ಕಮೆಂಟ್ ಮಾಡುವವರ ವಿರುದ್ಧವೂ ಕಾನೂನು ರೀತಿಯ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಯಾರೇ ಆದರೂ ವಿವಾದಾತ್ಮಕವಾದ ಪೋಸ್ಟರ್ , ಪ್ರಚೋದನಾಕಾರಿ ಹೇಳಿಕೆ, ಗುಂಪುಗಾರಿಕೆ, ಗಲಾಟೆ ಮಾಡಿ ಸಮಾಜದ ಶಾಂತಿ, ನೆಮ್ಮದಿಗೆ ಭಂಗ ತರುವುದು ಕಂಡು ಬಂದಲ್ಲಿ ಸಂಬಂಧ ಪಟ್ಟ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡುವಂತೆ ಕೋರಿದ್ದಾರೆ.

Edited By : PublicNext Desk
PublicNext

PublicNext

04/08/2022 08:10 pm

Cinque Terre

18.14 K

Cinque Terre

3

ಸಂಬಂಧಿತ ಸುದ್ದಿ