ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳ್ಳಾರೆ: ಪೊಲೀಸ್ ಠಾಣೆಗೆ ಭೇಟಿ ನೀಡಿದ ಎಡಿಜಿಪಿ

ಸುಳ್ಯ: ಪ್ರವೀಣ್ ನೆಟ್ಟಾರು ತನಿಖೆಯ ಮಾಹಿತಿ ಪಡೆದ ಎಡಿಜಿಪಿ ಅಲೋಕ್ ಕುಮಾರ್ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ವಿಚಾರಣೆಯ ಬಗ್ಗೆ ಎಡಿಜಿಪಿ ಅಲೋಕ್ ಕುಮಾರ್ ಬೆಳ್ಳಾರೆ ಠಾಣೆಗೆ ಭೇಟಿ ನೀಡಿದರು.

ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಸೋನಾವಣೆ (ಡಿವೈಎಸ್ಪಿ) ಗಾನ.ಪಿ ಕುಮಾರ್ ಬೆಳ್ಳಾರೆ ,ಠಾಣಾ ಎಸ್.ಐ ಸುಹಾಸ್ ಅವರೊಂದಿಗೆ ತನಿಖೆಯ ಬಗ್ಗೆ ಮಾಹಿತಿಯನ್ನು ಪಡೆದರು.

ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಎಡಿಜಿಪಿ ಅಲೋಕ್ ಕುಮಾರ್ “ಮಸೂದ್ ಹಾಗೂ ಪ್ರವೀಣ್ ನೆಟ್ಟಾರು ಕುರಿತ ಪ್ರಕರಣದ ಪ್ರಗತಿ ಯಾವ ಹಂತದಲ್ಲಿದೆ ಎಂಬುವುದನ್ನು ಅವಲೋಕಿಸಲು ಆಗಮಿಸಿದ್ದೇನೆ. ಯಾವೆಲ್ಲಾ ಸಾಕ್ಷಿಗಳು ಸಿಕ್ಕಿವೆ ಮತ್ತು ಸಂಶಯಾಸ್ಪದ ವ್ಯಕ್ತಿಗಳ ವಿಚಾರಣೆ ಹೇಗೆ ನಡೆದಿದೆ, ಒಟ್ಟು ತನಿಖೆಯ ಕುರಿತಾದ ಪ್ರಗತಿಯ ಬಗ್ಗೆ ಪರಿಶೀಲನೆ ನಡೆಸಿದ್ದೇನೆ. ಮುಂದೆ ಯಾವ ರೀತಿ ತನಿಖೆ ನಡೆಸಬೇಕು ಎಂಬ ಬಗ್ಗೆಯೂ ನಿರ್ದೇಶನ ನೀಡಲಾಗಿದೆ. ಮುಂದೆ ಇಂತಹ ಘಟನೆಗಳು ಮರುಕಳಿಸದಂತಾಗಲೂ ಸಿ.ಸಿ ಟಿವಿ ಅಳವಡಿಸುವಿಕೆ ಮುಂತಾದ ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ನಿರ್ದೇಶನ ನೀಡಿದ್ದೇನೆ. ಪ್ರಕರಣವನ್ನು ಎನ್.ಐ.ಎಗೆ ನೀಡಿದ್ದರೂ ಕೂಡ ಕರ್ನಾಟಕ ಪೊಲೀಸರಾಗಿ ನಾವು ಅವರಿಗೆ ಎಲ್ಲಾ ರೀತಿಯ ಸಹಕಾರ ಕೊಡುತ್ತೇವೆ. ಎನ್.ಐ.ಎ ನಮ್ಮ ಜೊತೆಗೆ ಸಂಪರ್ಕದಲ್ಲಿದ್ದಾರೆ.ಪ್ರಕರಣದ ಕುರಿತಾದ ಮಾಹಿತಿಯನ್ನು ಅವರೊಂದಿಗೆ ಹಂಚಿಕೊಂಡಿದ್ದೇವೆ.ಬೇರೆ ಸೆಂಟ್ರಲ್ ಎಜೆನ್ಸಿಗಳ ಜೊತೆಗೂ ನಾವು ಸಂಪರ್ಕವಿಟ್ಟುಕೊಂಡಿದ್ದು ಮಾಹಿತಿ ನೀಡಿದ್ದೇವೆ. ಎಂದು ಅಲೋಕ್ ಕುಮಾರ ಮಾಹಿತಿ ನೀಡಿದರು.

Edited By : Nagesh Gaonkar
PublicNext

PublicNext

04/08/2022 08:29 pm

Cinque Terre

42.54 K

Cinque Terre

0

ಸಂಬಂಧಿತ ಸುದ್ದಿ