ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ 30,729 ಪ್ರಕರಣಗಳು ಇತ್ಯರ್ಥ; 18.92 ಕೋಟಿ ರೂ. ಪರಿಹಾರ ವಸೂಲು

ಮಂಗಳೂರು: ರಾಷ್ಟ್ರೀಯ‌, ರಾಜ್ಯ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ದ.ಕ. ಜಿಲ್ಲಾ ಹಾಗೂ ತಾಲೂಕುಗಳ ನ್ಯಾಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿರುವ ‘ರಾಷ್ಟ್ರೀಯ ಲೋಕ ಅದಾಲತ್’ ನಲ್ಲಿ ಒಟ್ಟು 47 ಬೈಠಕ್‍ಗಳು ನಡೆದವು. ಇದರಲ್ಲಿ 35,649 ಪ್ರಕರಣಗಳು ಪರಿಗಣಿಸಲಾಗಿದ್ದು, 30,729 ಪ್ರಕರಣಗಳು ರಾಜಿಯಾಗಿದೆ. ಒಟ್ಟು 18,92,57,121 ಕೋಟಿ ರೂ. ರಾಜಿ ಮೊತ್ತದ ಪರಿಹಾರ ಹಣವನ್ನು ವಸೂಲಿ ಮಾಡಲಾಗಿದೆ.

ಈ ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ ಸಾರ್ವಜನಿಕರ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಸಿವಿಲ್ ಪ್ರಕರಣಗಳು, ಆಸ್ತಿ ವಿಭಾಗದ ಪ್ರಕರಣಗಳು ಹಾಗೂ ಇತರೆ ರಾಜಿಯಾಗಬಹುದಾದ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ.

ಈ ಅದಾಲತ್‍ನಲ್ಲಿ ಸಾರ್ವಜನಿಕರು ತಮ್ಮ ವ್ಯಾಜ್ಯಗಳು ಹಾಗೂ ಪ್ರಕರಣಗಳನ್ನು ಯಾವುದೇ ನ್ಯಾಯಾಲಯದ ಶುಲ್ಕವಿಲ್ಲದೇ ಇತ್ಯರ್ಥಗೊಳಿಸಿಕೊಂಡಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

14/08/2022 12:45 pm

Cinque Terre

9.12 K

Cinque Terre

1

ಸಂಬಂಧಿತ ಸುದ್ದಿ