ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ನೆರೆಯ ಜಿಲ್ಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ; ಉಡುಪಿಯಲ್ಲೂ ಪೊಲೀಸರಿಂದ ಬಿಗಿ ಬಂದೋಬಸ್ತ್

ಉಡುಪಿ: ಪಕ್ಕದ ಶಿವಮೊಗ್ಗದಲ್ಲಿನ ಉದ್ವಿಗ್ನ ಸ್ಥಿತಿ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಪೊಲೀಸರು ನಗರದ ಅಲ್ಲಲ್ಲಿ ನಾಕಾ ಬಂದಿ ಹಾಕಿ ವಾಹನಗಳನ್ನು ತಪಾಸಣೆಗೆ ಒಳಪಡಿಸುತ್ತಿದ್ದಾರೆ. ಜಿಲ್ಲೆಯಾದ್ಯಂತ ಹೆಚ್ಚುವರಿಯಾಗಿ 20 ಚೆಕ್‌ಪೋಸ್ಟ್‌ಗಳನ್ನು ತೆರೆಯಲಾಗಿದೆ.

ಎಸ್‌ಪಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ, ಡಿವೈಎಸ್‌ಪಿ, ಇನ್‌ಸ್ಪೆಕ್ಟರ್‌ಗಳು, ಪಿಸಿಗಳು ತಪಾಸಣೆ ಕಾರ್ಯದಲ್ಲಿ ನಿರತರಾಗಿದ್ದಾರೆ. ನಿನ್ನೆ ಬ್ರಹ್ಮಗಿರಿ ಸರ್ಕಲ್‌ನಲ್ಲಿ ಸಾವರ್ಕರ್ ಹಾಗೂ ಸುಭಾಷ್‌ ಚಂದ್ರ ಬೋಸ್ ಭಾವಚಿತ್ರಗಳಗೊಂಡ ಫ್ಲೆಕ್ಸ್ ಹಾಕಲಾಗಿದ್ದು, ಅದರಲ್ಲಿ ಜೈ ಹಿಂದೂ ರಾಷ್ಟ್ರ ಎಂದು ಬರೆಯಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಬಂದೋಬಸ್ತ್ ಮಂಗಳವಾರವೂ ಮುಂದುವರಿಯಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.

Edited By : Manjunath H D
PublicNext

PublicNext

16/08/2022 09:44 am

Cinque Terre

54.07 K

Cinque Terre

11

ಸಂಬಂಧಿತ ಸುದ್ದಿ