ಉಡುಪಿ: ಈ ಹಿಂದೆ ಉಡುಪಿಯಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿದ್ದ ಸಿ.ಎಂ ಜೋಷಿ ಮತ್ತು ಕರ್ನಾಟಕ ಉಚ್ಛ ನ್ಯಾಯಾಲಯದ ರಿಜಿಸ್ಟ್ರಾರ್ ಜನರಲ್ ಆಗಿದ್ದ ಟಿ ಜಿ ಶಿವಶಂಕರೇಗೌಡ ಅವರು, ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದು ,ಅವರನ್ನು ಉಡುಪಿ ವಕೀಲರ ಸಂಘದ ವತಿಯಿಂದ ಇಂದು ಬೆಂಗಳೂರಿನ ರಾಜಭವನದಲ್ಲಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಉಡುಪಿ ವಕೀಲರ ಸಂಘದ ಅಧ್ಯಕ್ಷರಾದ ಬಿ. ನಾಗರಾಜ್ ,ಪ್ರಧಾನ ಕಾರ್ಯದರ್ಶಿ ರೆನೋಲ್ಡ್ ಪ್ರವೀಣ್ ಕುಮಾರ್ ,ಮಾಜಿ ಅಧ್ಯಕ್ಷರಾದ ಟಿ ವಿಜಯ ಕುಮಾರ್ ಶೆಟ್ಟಿ ,ವಕೀಲರಾದ ಎಚ್. ಆನಂದ ಮಡಿವಾಳ,ಗಂಗಾಧರ ಎಚ್. ಎಂ ಉಪಸ್ಥಿತರಿದ್ದರು.
Kshetra Samachara
16/08/2022 03:06 pm