ಸುರತ್ಕಲ್: ಪೊಲೀಸ್, ಠಾಣಾ ವ್ಯಾಪ್ತಿಯಲ್ಲಿ ನಡೆಯುವ ಶ್ರೀ ಗಣೇಶೋತ್ಸವ ಹಬ್ಬ ಮತ್ತು ಕೋಮು ಸೌಹಾರ್ದತೆ ಕಾಪಾಡುವ ದೃಷ್ಠಿಯಿಂದ ಶಾಂತಿ ಸಭೆ ಸುರತ್ಕಲ್ ಠಾಣೆಯಲ್ಲಿ ನಡೆಯಿತು.
ಶಾಂತಿ ಸಭೆಯ ಅಧ್ಯಕ್ಷತೆಯನ್ನು ಮಂಗಳೂರು ಉತ್ತರ ವಿಭಾಗ ಎ ಸಿ ಪಿ ಮಹೇಶ್ ಕುಮಾರ್ ವಹಿಸಿ ಮಾತನಾಡಿ ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ನಡೆಯುವ ಹಬ್ಬ ಹರಿದಿನಗಳಲ್ಲಿ ನಾಗರಿಕರ ಸಹಕಾರ ಮುಖ್ಯ, ಕಾರ್ಯಕ್ರಮಗಳಲ್ಲಿ ಶಾಂತಿ ಸೌಹಾರ್ದತೆಯನ್ನು ಕಾಪಾಡಿಕೊಳ್ಳುವ ಮೂಲಕ ಬರುವ ಹಬ್ಬಗಳನ್ನು ಯಶಸ್ವಿಯಾಗಿ ನಡೆಸಿಕೊಡಬೇಕು ಎಂದು ನಾಗರಿಕರಿಗೆ ಮನವಿ ಮಾಡಿದರು.
ಸುರತ್ಕಲ್ ಠಾಣಾ ನಿರೀಕ್ಷಕರು ಉಪ ನಿರೀಕ್ಷಕರು ಮತ್ತು ಸಿಬ್ಬಂದಿ ವರ್ಗ ಹಾಗೂ ವಿವಿಧ ವರ್ಗದ ಮುಖಂಡರು ಹಾಗೂ ನಾಗರಿಕರು ಭಾಗವಹಿಸಿದ್ದರು.
Kshetra Samachara
22/08/2022 11:19 am