ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಪು ತಾಲೂಕಿನಲ್ಲಿ ಎಸ್ಪಿ ರೌಂಡ್ಸ್‌; ಕಾನೂನು ಸುವ್ಯವಸ್ಥೆ ಬಗ್ಗೆ ಸಮಾಲೋಚನೆ

ಕಾಪು: ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿರುವ ಅಕ್ಷಯ್ ಮಚೀಂದ್ರ ಅವರು ಕಾಪು ಠಾಣಾ ವ್ಯಾಪ್ತಿಯಲ್ಲಿ ರೌಂಡ್ಸ್ ಮಾಡಿದ್ದಾರೆ. ನೂತನ ಎಸ್ಪಿಯಾಗಿ ಮೊದಲ ಬಾರಿಗೆ ಕಾಪು, ಕಟಪಾಡಿ, ಕೋಟೆ ಮಟ್ಟು, ಶಿರ್ವಕ್ಕೆ ಭೇಟಿ ನೀಡಿದರು. ಕೆಲವೊಂದು ಪ್ರದೇಶಗಳ ಮಾಹಿತಿ ಪಡೆದುಕೊಂಡ ಎಸ್‌ಪಿ ಅವರು ಮಾತನಾಡಿ ಉಡುಪಿ ಜಿಲ್ಲೆಯ ಕೆಲವೊಂದು ಸಮಸ್ಯೆಗಳು ತಮ್ಮ ಗಮನಕ್ಕೆ ಬಂದಿದ್ದು ಮುಂದಿನ ದಿನಗಳಲ್ಲಿ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಮಾದಕ ದ್ರವ್ಯ ನಿಯಂತ್ರಣಕ್ಕೆ ಸಂಬಂಧಿಸಿ ಎಸ್ಪಿ ನೇತೃತ್ವದಲ್ಲಿ ಜಿಲ್ಲಾದ್ಯಂತ ಕಾರ್ಯಾಚರಣೆಗಳು ನಡೆಯುತ್ತಿವೆ. ಕಳೆದೊಂದು ವಾರದಲ್ಲಿ ಹಲವರನ್ನು ಬಂಧಿಸಲಾಗಿದ್ದು ಮಾದಕ ದ್ರವ್ಯ ಸೇವನೆ ಮತ್ತು ಸಾಗಾಟಕ್ಕೆ ಸಂಬಂಧಿಸಿ ಐವತ್ತಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.

Edited By : Manjunath H D
Kshetra Samachara

Kshetra Samachara

30/08/2022 08:03 pm

Cinque Terre

4.22 K

Cinque Terre

0