ಉಡುಪಿ: ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಅಳವಡಿಸಲಾದ ಎರಡು ಲಿಫ್ಟ್‌ಗಳನ್ನ ಇಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ಉದ್ಘಾಟಿಸಿದರು. ಬೆಳಿಗ್ಗೆ ಈ ಪ್ರಯುಕ್ತ ನ್ಯಾಯಾಲಯದಲ್ಲಿ ಲಕ್ಷ್ಮೀ ಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ನ್ಯಾಯಾಧೀಶರು, ವಕೀಲರು ಹಾಗೂ ಸಿಬ್ಬಂದಿ ಪಾಲ್ಗೊಂಡರು.
ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶ ಶ್ರೀನಿವಾಸ್ ಸುವರ್ಣ, 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ದಿನೇಶ್ ಹೆಗ್ಡೆ, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಸಿ.ಜೆ.ಎಮ್. ಶಕುಂತಲಾ ವೇದಿಕೆಯಲ್ಲಿ ಉಸ್ಥಿತರಿದ್ದರು. ವಕೀಲರ ಸಂಘದ ಅಧ್ಯಕ್ಷ ಬಿ. ನಾಗರಾಜ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ರೆನೋಲ್ಡ್ ಪ್ರವೀಣ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.
Kshetra Samachara
01/09/2022 07:09 pm