ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರ್ಕಳ: ಬಿಜೆಪಿ ಭಿನ್ನಮತ ಹೊಡೆತ; ಮಾಳ ಗ್ರಾಪಂ ಅಧ್ಯಕ್ಷೆ ಪದಚ್ಯುತ

ವರದಿ: ಕೃಷ್ಣ ಅಜೆಕಾರ್

ಕಾರ್ಕಳ: ಬಿಜೆಪಿಯ ಎರಡು ಬಣಗಳ ನಡುವಿನ ಆಂತರಿಕ ಕಚ್ಚಾಟಕ್ಕೆ ಮಾಳ ಗ್ರಾಮ ಪಂಚಾಯಿತಿ ಅಧ್ಯಕ್ಷೆಯ ತಲೆದಂಡವಾಗಿದೆ.

ಕಾರ್ಕಳ ತಾಲೂಕಿನ ಮಾಳ ಗ್ರಾಮ ಪಂಚಾಯಿತಿಯಲ್ಲಿ ಬಿಜೆಪಿ ಬೆಂಬಲಿತ ಆಡಳಿತವಿದ್ದು ಒಟ್ಟು 15 ಸದಸ್ಯ ಬಲದಲ್ಲಿ ಎಲ್ಲಾ ಸದಸ್ಯರು ಬಿಜೆಪಿ ಬೆಂಬಲಿತರಾಗಿದ್ದಾರೆ. ಇದೀಗ ತಮ್ಮ ಪಕ್ಷದಿಂದ ಆಯ್ಕೆಯಾಗಿರುವ ಅಧ್ಯಕ್ಷರ ವಿರುದ್ಧವೇ ತಿರುಗಿ ಬಿದ್ದಿದ್ದು, ಬುಧವಾರ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿ ಪದಚ್ಯುತಗೊಳಿಸಿದ್ದಾರೆ.

ಮಲ್ಲಿಕಾ ಶೆಟ್ಟಿ ವಿರೋಧಿ ಬಣದ 10 ಸದಸ್ಯರು ಅವಿಶ್ವಾಸ ನಿರ್ಣಯದ ಪರವಾಗಿ ಮತ ಚಲಾಯಿಸುವ ಮೂಲಕ ಅಧ್ಯಕ್ಷ ಸ್ಥಾನದಿಂದ ವಜಾ ಗೊಳಿಸಿದ್ದಾರೆ. ಮಲ್ಲಿಕಾ ಶೆಟ್ಟಿ ಪಕ್ಷದ ಶಿಸ್ತು ಉಲ್ಲಂಘಿಸಿದ್ದಾರೆ ಎಂಬ ಆರೋಪದಡಿ ಪಕ್ಷದ ವರಿಷ್ಠರು ರಾಜೀನಾಮೆಗೆ ಸೂಚಿಸಿದ್ದರೂ ರಾಜೀನಾಮೆ ನೀಡದೇ ಸವಾಲೆಸೆದಿರುವ ಹಿನ್ನೆಲೆಯಲ್ಲಿ ಇಂಧನ ಸಚಿವರ ಕ್ಷೇತ್ರದಲ್ಲೇ ಇಂತಹ ಬೆಳವಣಿಗೆ ನಡೆದಿರುವುದು ಬಿಜೆಪಿಗೆ ಭಾರೀ ಹೊಡೆತ ನೀಡಿದೆ.

ನಿಷ್ಠಾವಂತ, ಪ್ರಾಮಾಣಿಕ ಕಾರ್ಯಕರ್ತಳಾದ ನನಗೆ ಅನ್ಯಾಯವಾಗಿದೆ. ಈ ಕುರಿತು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು ಎಂದು ಮಲ್ಲಿಕಾ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ಶಿಸ್ತಿನ ಪಕ್ಷವಾಗಿದೆ. ಪಕ್ಷದ ಶಿಸ್ತು- ನಿಯಮ ಉಲ್ಲಂಘಿಸಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಾಗುವುದು ಎಂದು ಕಾರ್ಕಳ ಬಿಜೆಪಿ ಅಧ್ಯಕ್ಷ ಮಹಾವೀರ ಹೆಗ್ಡೆ ಎಚ್ಚರಿಸಿದ್ದಾರೆ.

ಬಿಜೆಪಿಯಲ್ಲಿನ ಈ ಆಂತರಿಕ ಭಿನ್ನಮತದ ಬೇಗುದಿ ಮುಂಬರುವ ಚುನಾವಣೆ ಮೇಲೆ ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಈ ಎಲ್ಲಾ ಗೊಂದಲಗಳನ್ನು ಹೇಗೆ ಪರಿಹರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

Edited By :
Kshetra Samachara

Kshetra Samachara

01/09/2022 08:03 pm

Cinque Terre

17.92 K

Cinque Terre

4

ಸಂಬಂಧಿತ ಸುದ್ದಿ