ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಣಿಪಾಲ ಸಮೂಹ ಸಂಸ್ಥೆಗಳ ಮೇಲೆ ಐಟಿ ಅಧಿಕಾರಿಗಳ ದಾಳಿ: ದಾಖಲೆಗಳ ಪರಿಶೀಲನೆ

ಮಣಿಪಾಲ: ಬೆಂಗಳೂರಿನ ಮಣಿಪಾಲ್ ಗ್ರೂಪ್ ಮೇಲೆ ಐಟಿ ದಾಳಿ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಮಣಿಪಾಲದಲ್ಲೂ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.ಬೆಳಿಗ್ಗೆ ಮಣಿಪಾಲಕ್ಕೆ ಆಗಮಿಸಿದ ಆದಾಯ ತೆರಿಗೆ ಅಧಿಕಾರಿಗಳ ತಂಡ ,ಮಣಿಪಾಲ್ ಗ್ರೂಪ್ ನ ಫೈನಾನ್ಸ್ ವಿಭಾಗದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರು ಮತ್ತು ಮಂಗಳೂರಿ ನಿಂದ ಬಾಡಿಗೆ ಕಾರಿನ ಮೂಲಕ ಅಧಿಕಾರಿಗಳ ತಂಡ ಬೆಳ್ಳಂಬೆಳಿಗ್ಗೆ ಇಲ್ಕಿಗೆ ಆಗಮಿಸಿತ್ತು. ಸದ್ಯ ದಾಖಲೆಗಳನ್ನು ಪರಿಶೀಲಿಸುತ್ತಿರುವ ಐಟಿ ಅಧಿಕಾರಿಗಳು, ಸಂಜೆತನಕ ದಾಖಲೆಗಳನ್ನು ಜಾಲಾಡುವ ಸಾಧ್ಯತೆ ಇದೆ.

Edited By :
Kshetra Samachara

Kshetra Samachara

07/09/2022 02:52 pm

Cinque Terre

3.42 K

Cinque Terre

1

ಸಂಬಂಧಿತ ಸುದ್ದಿ