ಮಂಗಳೂರು: ನಗರದ ನೆಲ್ಲಿಕಾಯಿ ರಸ್ತೆಯಲ್ಲಿರುವ ಪಿಎಫ್ಐ, ಎಸ್‌ಡಿಪಿಐ ಕಚೇರಿ ಮೇಲೆ ಎನ್ಐಎ ದಾಳಿ ನಡೆದಿದೆ.
ಬಿಗಿ ಪೊಲೀಸ್ ಬಂದೋಬಸ್ತಿನಲ್ಲಿ ಎನ್ಐಎ ದಾಳಿ ನಡೆಸಿದೆ. ಎನ್ಐಎ ದಾಳಿಯನ್ನು ಖಂಡಿಸಿ ಪಿಎಫ್ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಎನ್ಐಎ ದಾಳಿಯ ವೇಳೆ ನೆಲ್ಲಿಕಾಯಿ ರಸ್ತೆಯನ್ನು ಪೊಲೀಸರು ಬಂದ್ ಮಾಡಿದ್ದಾರೆ. ಅರೆಮೀಸಲು ಪಡೆಯಿಂದ ಭಾರೀ ಕಟ್ಟೆಚ್ಚರ ವಹಿಸಲಾಗಿದೆ.
ಈ ವೇಳೆ ಪಿಎಫ್ಐ, ಎಸ್‌ಡಿಪಿಐ ಮುಖಂಡರ ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಬಜ್ಪೆ, ಜೋಕಟ್ಟೆ ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಎನ್‌ಐಎ ದಾಳಿ ನಡೆಸಿದೆ.
PublicNext
22/09/2022 08:12 am