ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಎಸ್‌ಡಿಪಿಐ ಬೆಳವಣಿಗೆ ಸಹಿಸದೆ ಬಿಜೆಪಿ ಎನ್ಐಎಯಿಂದ ದಾಳಿ ಮಾಡಿಸಿದೆ; ನಾಯಕರ ಆರೋಪ

ಮಂಗಳೂರು: ನಗರದ ನೆಲ್ಲಿಕಾಯಿ ರಸ್ತೆಯಲ್ಲಿರುವ ಎಸ್‌ಡಿಪಿಐ, ಪಿಎಫ್ಐ ಕಚೇರಿಯಲ್ಲಿ ಎನ್ಐಎ ದಾಳಿ ಅಂತ್ಯಗೊಂಡಿದೆ. ಹಲವು ಮಹತ್ವದ ದಾಖಲೆಗಳು, ಕಡತಗಳು, ಲ್ಯಾಪ್‌ಟಾಪ್‌ಗಳೊಂದಿಗೆ ಎನ್ಐಎ ಅಧಿಕಾರಿಗಳು ಮರಳಿದ್ದಾರೆ.

ದಾಳಿಯ ಬಗ್ಗೆ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಬೂಬಕರ್ ಕುಳಾಯಿ ಪ್ರತಿಕ್ರಿಯಿಸಿ, ಎನ್ಐಎ ತಂಡ ಪಿಎಫ್ಐ ಕಚೇರಿಗೆ ದಾಳಿ ನಡೆಸಿದೆ. ಆದರೆ ಅವರಿಗೆ ತಿಳಿಯದೆ ಎಸ್‌ಡಿಪಿಐ ಕಚೇರಿಗೆ ದಾಳಿ ನಡೆಸಿದ್ದಾರೆ. ನೆಲ್ಲಿಕಾಯಿ ರಸ್ತೆಯಲ್ಲಿರುವ ಎಸ್‌ಡಿಪಿಐ ಕಚೇರಿಯಿರುವ ಕಟ್ಟಡದ ಮೇಲ್ಗಡೆ ಪಿಎಫ್ಐ ಕಚೇರಿಯಿದೆ‌. ಆ ಬಳಿಕ ಎರಡೂ ಕಚೇರಿಗಳನ್ನು ಪರಿಶೀಲನೆ ಮಾಡಿದ್ದಾರೆ.

ನಮ್ಮ ಲ್ಯಾಪ್‌ಟಾಪ್, ಕೆಲವೊಂದು ದಾಖಲೆಗಳನ್ನು ದಾಳಿ ವೇಳೆ ಎನ್ಐಎ ವಶಕ್ಕೆ ತೆಗೆದುಕೊಂಡಿದೆ. ನಮ್ಮನ್ನು ಯಾವುದೇ ರೀತಿ ವಿಚಾರಣೆ ಮಾಡಿಲ್ಲ. ನಮ್ಮ ಕಪಾಟುಗಳನ್ನು ಸಂಪೂರ್ಣ ಪರಿಶೀಲನೆ ಮಾಡಿದ್ದಾರೆ. ಯಾವ ಕಾರಣಕ್ಕೆ ಈ ದಾಳಿ ನಡೆಸಿದೆ ಎಂದು ಎನ್ಐಎ ತಂಡ ತಿಳಿಸಿಲ್ಲ. ಆದರೆ ನಾವು ರಾಜಕೀಯವಾಗಿ ಬೆಳವಣಿಗೆ ಆಗುತ್ತಿದ್ದೇವೆ ಎಂಬ ಕುತಂತ್ರದಿಂದ ಬಿಜೆಪಿ ಈ ದಾಳಿಯನ್ನು ನಡೆಸಿದೆ ಎಂದರು.

Edited By : Shivu K
PublicNext

PublicNext

22/09/2022 12:26 pm

Cinque Terre

24.76 K

Cinque Terre

5

ಸಂಬಂಧಿತ ಸುದ್ದಿ