ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುರತ್ಕಲ್: ಹೆದ್ದಾರಿ ತಡೆ ಕೇಸ್‌; ಪಿಎಫ್‌ಐ ಎಸ್‌ಡಿಪಿಐ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲು

ಸುರತ್ಕಲ್: ವಿವಿಧೆಡೆ ಪಿಎಫ್‌ಐ ಎಸ್‌ಡಿಪಿಐ ಮುಖಂಡರು, ಕಾರ್ಯಕರ್ತರ ಮನೆ ಮೇಲೆ ಎನ್‌ಐಎ ದಾಳಿ ನಡೆಸಿರುವುದನ್ನು ಖಂಡಿಸಿ ಸುರತ್ಕಲ್‌ನಲ್ಲಿ ದಿಢೀರ್ ಹೆದ್ದಾರಿ ತಡೆ ನಡೆಸಿ ಪ್ರತಿಭಟನೆ ಮಾಡಿದವರ ವಿರುದ್ಧ ಸುರತ್ಕಲ್ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಗುರುವಾರ ಬೆಳ್ಳಂಬೆಳಗ್ಗೆ ಎನ್‌ಐಎ ದಾಳಿ ನಡೆಸಿ ಹಲವರನ್ನು ವಶಕ್ಕೆ ತೆಗೆದುಕೊಂಡಿದ್ದರು. ಇದಾದ ಹೊತ್ತಿನಲ್ಲೇ ವಿವಿಧೆಡೆ ಪ್ರತಿಭಟನೆ ಮಾಡಲಾಗಿತ್ತು. ಸುರತ್ಕಲ್‌ನಲ್ಲಿ ಸ್ಥಳೀಯರಲ್ಲದೆ ಬೇರೆಡೆಯಿಂದ ಬಂದು ಜಮಾಯಿಸಿದ ಕಾರ್ಯಕರ್ತರು ದಿಢೀರ್ ರಸ್ತೆ ತಡೆ ನಡೆಸಿದ್ದರು. ಇದರಿಂದ ಹೆದ್ದಾರಿ ಸಂಚಾರ ವ್ಯವಸ್ಥೆ ಅಸ್ತವ್ಯವಸ್ತವಾಗಿತ್ತು. ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಕೆಲವರನ್ನು ವಶಕ್ಕೆ ಪಡೆದು ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಟ್ಟಿದ್ದರು. ಸದ್ಯ ಈ ಸಂಬಂಧ ಸುಮಾರು 60ಕ್ಕೂ ಹೆಚ್ಚು ಜನರ ಮೇಲೆ ಕೇಸ್‌ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

24/09/2022 08:34 am

Cinque Terre

5.82 K

Cinque Terre

0

ಸಂಬಂಧಿತ ಸುದ್ದಿ