ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಮಳಲಿ ಮಸೀದಿ ವಿಚಾರ; ಅ.17ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

ಮಂಗಳೂರು: ನಗರದ ಮಳಲಿ ಮಸೀದಿ v/s ವಿಎಚ್ ಪಿ ತೀರ್ಪು ವಿಚಾರದಲ್ಲಿ ಆದೇಶ ಮುಂದೂಡಿರುವ ಮಂಗಳೂರಿನ 3ನೇ ಹೆಚ್ಚುವರಿ ಸಿವಿಲ್ ಕೋರ್ಟ್ ಅಕ್ಟೋಬರ್ 17ಕ್ಕೆ ಆದೇಶ ಕಾಯ್ದಿರಿಸಿದೆ.ಮೂಲ ದಾವೆ ಆಲಿಸಲು ವಿಚಾರಣಾಧೀನ ನ್ಯಾಯಾಲಯದ ಅಧಿಕಾರ ವ್ಯಾಪ್ತಿಯ ಕುರಿತು ಇಂದು ತೀರ್ಪು ಬರಬೇಕಿತ್ತು. ಆದರೆ ಆದೇಶವನ್ನು ಪ್ರಕಟಿಸದೆ ತೀರ್ಪನ್ನು ನ್ಯಾಯಾಲಯ ಮುಂದೂಡಿದೆ.

2022ರ ಎಪ್ರಿಲ್ ನಲ್ಲಿ ನಗರದ ಹೊರವಲಯದಲ್ಲಿರುವ ಮಳಲಿ ಮಸೀದಿ ನವೀಕರಣದ ವೇಳೆ ಕಟ್ಟಡ ಕೆಡವಿದ ಸಂದರ್ಭ ಹಿಂದೂ ಶೈಲಿಯ ಮರದ ಕೆತ್ತನೆ ಪತ್ತೆಯಾಗಿತ್ತು. ಈ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸ್ಥಳದಲ್ಲಿ ಪೊಲೀಸ್ ನಿಯೋಜನೆ ಮಾಡಿ ಬಂದೋಬಸ್ತು ವ್ಯವಸ್ಥೆ ಮಾಡಲಾಗಿತ್ತು‌. ಈ ನಡುವೆ ಹಿಂದೂ ಸಂಘಟನೆಗಳು ಮಧ್ಯ ಪ್ರವೇಶಿಸಿ ಮಸೀದಿ ಇರುವ ಸ್ಥಳದ ಬಗ್ಗೆ ತಾಂಬೂಲ ಪ್ರಶ್ನಾ ಚಿಂತನೆ ಇರಿಸಿತ್ತು. ಆಗ ಅಲ್ಲಿ ಗುರುಸಾನಿಧ್ಯ ಗೋಚರವಾಗಿತ್ತು.

ಆ ಬಳಿಕ ಈ ವಿಚಾರದಲ್ಲಿ ವಿಎಚ್ ಪಿ‌ ಕಾನೂನು ಸಮರ ನಡೆಸಲು ನಿರ್ಧರಿಸಿ ಕೋರ್ಟ್ ಮೆಟ್ಟಿಲೇರಿತ್ತು. 2022 ಮೇ ತಿಂಗಳಿನಿಂದ ಮಂಗಳೂರು ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್ ನಲ್ಲಿ ಮಳಲಿ ಮಸೀದಿ ವಿಚಾರದಲ್ಲಿ ವಿಚಾರಣೆ ನಡೆಯುತ್ತಿದೆ.

Edited By : Nirmala Aralikatti
PublicNext

PublicNext

27/09/2022 05:54 pm

Cinque Terre

12.39 K

Cinque Terre

0

ಸಂಬಂಧಿತ ಸುದ್ದಿ