ಉಡುಪಿ: ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ಇತ್ತೀಚೆಗೆ ನೇಮಕಗೊಂಡ ನ್ಯಾಯಮೂರ್ತಿ ಸಿ.ಎಂ ಜೋಷಿ ಮತ್ತು ಟಿ.ಜಿ ಶಿವಶಂಕರೇಗೌಡ ಅವರನ್ನು ಅಭಿನಂದಿಸುವ ಕಾರ್ಯಕ್ರಮ ಶನಿವಾರ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ನಡೆಯಿತು.
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ, ನ್ಯಾಯವಾದಿ ಮತ್ತು ಅಶೀದುಲ್ಲ ಶುಭಾಶಂಸನೆಗೈದರು.
ವಕೀಲರ ಸಂಘದ ಅಧ್ಯಕ್ಷ ಬಿ. ನಾಗರಾಜ್ ಸ್ವಾಗತಿಸಿ, ಪ್ರ. ಕಾರ್ಯದರ್ಶಿ ರೆನೋಲ್ಡ್ ಪ್ರವೀಣ್ ಕುಮಾರ್ ವಂದಿಸಿ, ನ್ಯಾಯವಾದಿ ಮೊಹಮ್ಮದ್ ಸುಹಾನ್ ನಿರೂಪಿಸಿದರು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ಅಧ್ಯಕ್ಷತೆ ವಹಿಸಿದ್ದರು. ನ್ಯಾ.ಶರ್ಮಿಲಾ ಎಸ್, ರಾಜ್ಯ ವಕೀಲರ ಪರಿಷತ್ತಿನ ಸದಸ್ಯ ಪಿ. ಪಿ. ಹೆಗ್ಡೆ, ವಕೀಲರ ಸಂಘ ಕುಂದಾಪುರ ಅಧ್ಯಕ್ಷ ಬಿ.ಸೋಮನಾಥ್ ಹೆಗ್ಡೆ, ಕಾರ್ಕಳ ಅಧ್ಯಕ್ಷ ಸುನಿಲ್ ಕೆ. ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
PublicNext
02/10/2022 11:28 am