ಉಡುಪಿ: ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿ ಬಳಿಕ ನಿಷೇಧಗೊಂಡಿದ್ದ ವಿದ್ಯಾರ್ಥಿನಿಯರ ಹಿಜಾಬ್ ಕುರಿತ ಸುಪ್ರೀಂ ಕೋರ್ಟ್ ತೀರ್ಪು ಈ ವಾರ ಹೊರಬೀಳುವ ಸಾಧ್ಯತೆ ಇದೆ.ನ್ಯಾ| ಹೇಮಂತ್ ಗುಪ್ತಾ ಮತ್ತು ನ್ಯಾ| ಸುಧಾಂಶು ದುಲಿಯಾ ಅವರನ್ನೊಳಗೊಂಡ ನ್ಯಾಯಪೀಠ ಸತತ ಹತ್ತು ದಿನ ವಿಚಾರಣೆ ನಡೆಸಿ ಸೆ.22 ರಂದು ತೀರ್ಪು ಕಾಯ್ದಿರಿಸಿತ್ತು. ನ್ಯಾ| ಹೇಮಂತ್ ಗುಪ್ತಾ ಅವರು ಅ.16ರಂದು ನಿವೃತ್ತಿಯಾಗುವರು. ಹೀಗಾಗಿ, ಈ ವಾರವೇ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶದ ವಿರುದ್ಧ ಸಲ್ಲಿಸಲಾಗಿದ್ದ ಮೇಲ್ಮನವಿ ಅರ್ಜಿಗಳ ಬಗ್ಗೆ ತೀರ್ಪು ಪ್ರಕಟವಾಗುವ ಸಂಭವವಿದೆ.
ಉಡುಪಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಕೆಲವು ವಿದ್ಯಾರ್ಥಿನಿಯರು ಕಾಲೇಜಿನಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದರು. ಈ ವಿಷಯ ಕರ್ನಾಟಕ ಹೈಕೋರ್ಟ್‌ನಲ್ಲಿಯೂ ವಿಚಾರಣೆ ನಡೆದು ಮಾ.15ರಂದು ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ ಇಲ್ಲ ಎಂದು ತೀರ್ಪು ನೀಡಿತ್ತು.
PublicNext
11/10/2022 01:57 pm