ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಖಂಡಿಗೆ: ಭಕ್ತಿಭಾವದ ಮೀನು ಹಿಡಿಯುವ ಜಾತ್ರೆ

ಸುರತ್ಕಲ್ ಸಮೀಪದ ಖಂಡಿಗೆ ಶ್ರೀ ಧರ್ಮರಸು ಉಳ್ಳಾಯ ದೈವಸ್ಥಾನದ ಜಾತ್ರಾಮಹೋತ್ಸವದ ಅಂಗವಾಗಿ ಶನಿವಾರ ಮೀನು ಹಿಡಿಯುವ ಜಾತ್ರೆ ನಡೆಯಿತು.

ಬೆಳಗ್ಗೆ 7 ಗಂಟೆಯಿಂದಲೇ ವಿವಿಧ ಜಾತಿ ಪಂಗಡದ ಜನತೆ ನಂದಿನಿ ನದಿಯಲ್ಲಿ ಮೀನು ಹಿಡಿಯುವ ಕಾರ್ಯದಲ್ಲಿ ನಿರತರಾಗಿದ್ದರು. ಚೇಳಾಯರು ಗ್ರಾಮದ ಖಂಡಿಗೆಯ ಇತಿಹಾಸ ಪ್ರಸಿದ್ಧ ಶ್ರೀ ಧರ್ಮರಸು ಕ್ಷೇತ್ರವು ಪಾವಂಜೆ ರಾಷ್ಟ್ರೀಯ ಹೆದ್ದಾರಿ ಸೇತುವೆ ಸಮೀಪ ನಂದಿನಿ ನದಿಯ ತಟದಲ್ಲಿದ್ದು, ದೈವಸ್ಥಾನದಲ್ಲಿ ವರ್ಷಾವಧಿ ಜಾತ್ರೆ ಮೇ ತಿಂಗಳಲ್ಲಿ ಬರುವ ವೃಷಭ ಸಂಕ್ರಮಣದಂದು ನಡೆಯುತ್ತದೆ. ಈ ನದಿಯಲ್ಲಿ ಮೀನು ಹಿಡಿಯುವ ಪದ್ಧತಿ ಹಿಂದಿನಿಂದಲೂ ನಡೆಯುತ್ತಿರುವುದು ವಾಡಿಕೆ.

ವೃಷಭ ಸಂಕ್ರಮಣದಂದು ಬೆಳಗ್ಗೆ 7ರ ಸುಮಾರಿಗೆ ದೈವಸ್ಥಾನದಲ್ಲಿ ಸಂಬಂಧ ಪಟ್ಟವರು ದೈವಕ್ಕೆ ಪ್ರಾಥನೆ ಸಲ್ಲಿಸಿ ನಂದಿನಿ ನದಿಯ ದಡಕ್ಕೆ ಆಗಮಿಸಿ ನದಿಗೆ ಪ್ರಸಾದ ಹಾಕಿ ಅದೇ ಸಂದರ್ಭ ಸುಡು ಮದ್ದು ಸಿಡಿಸಲಾಗುತ್ತದೆ. ತಕ್ಷಣ ಮೀನು ಹಿಡಿಯಲು ಬಂದ ಜನರು ನದಿಗೆ ಧುಮುಕಿ ಮೀನು ಹಿಡಿಯಲು ಆರಂಭಿಸುತ್ತಾರೆ.

ಮಧ್ಯಾಹ್ನದವರೆಗೂ ಮೀನು ಹಿಡಿದು, ಹಿಡಿದ ಮೀನನ್ನು ಮನೆಗೆ ತೆಗೆದು ಕೊಂಡು ಹೋಗಿ, ಮೃತಪಟ್ಟ ಹಿರಿಯರಿಗೆ ಬಡಿಸುವ ಕ್ರಮ ಇಲ್ಲಿಯದು. ಇದು ಈಗಲೂ ಹೆಚ್ಚಿನ ಮನೆಗಳಲ್ಲಿ ಆಚರಿಸಿಕೊಂಡು ಬರುತ್ತಿದ್ದಾರೆ.

ಬೆಳಗ್ಗೆ ಮೀನು ಹಿಡಿಯುವ ಜಾತ್ರೆಯಾದರೆ ಕ್ಷೇತ್ರದಲ್ಲಿ ರಾತ್ರಿ ಧಾರ್ಮಿಕ ಕಾರ್ಯಕ್ರಮ ಬಳಿಕ ಧ್ವಜಾವರೋಹಣ ನಡೆಯುತ್ತದೆ.

ನದಿಯಲ್ಲಿ ಕೈಗಾರಿಕೆಗಳ ಮಲೀನ ನೀರು, ಹೂಳು ತುಂಬಿರುವುದಲ್ಲದೆ ಅಣೆಕಟ್ಟು ತೆರೆದು ನೀರಿನ ಒಳ ಹರಿವು ಇಲ್ಲದೆ ಮೀನು ವಿರಳವಾಗಿ ದೊರೆತಿದೆ ಎಂದು ಸ್ಥಳೀಯರಾದ ಕುಸುಮಾಕರ ಖಂಡಿಗೆ ಹೇಳುತ್ತಾರೆ.

ಧರ್ಮರಸು ಉಳ್ಳಾಯ ದೈವಸ್ಥಾನದ ಗಡಿ ಪ್ರದಾನ ಆದಿತ್ಯ ಮುಕ್ಕಾಲ್ದಿ ಮಾತನಾಡಿ ಈಗಿನ ಯುವಜನಾಂಗಕ್ಕೆ ಮೀನು ಹಿಡಿಯಲು ಉದಾಸೀನ ಪ್ರವೃತ್ತಿ ತೋರಿಸುತ್ತಿದ್ದು, ಅಪಪ್ರಚಾರ ಮಾಡುತ್ತಿದ್ದಾರೆ ಎಂದರು.

Edited By : Somashekar
Kshetra Samachara

Kshetra Samachara

14/05/2022 01:18 pm

Cinque Terre

14.31 K

Cinque Terre

2

ಸಂಬಂಧಿತ ಸುದ್ದಿ