ಶಿರ್ವ: ಶಿರ್ವ ಗ್ರಾ. ಪಂ.ವ್ಯಾಪ್ತಿಯ ಕಲ್ಲೊಟ್ಟು, ಸೊರ್ಪು,ಆಗೋಳಿಬೈಲು, ಪದವು ಪರಿಸರದಲ್ಲಿ ಕಳೆದ ಕೆಲ ದಿನಗಳಿಂದ ಚಿರತೆಯೊಂದು ಓಡಾಡುತ್ತಿದೆ ಎನ್ನಲಾಗಿದ್ದು ಗ್ರಾಮಸ್ಥರು ಭಯಭೀತರಾಗಿದ್ದಾರೆ.ಅರಣ್ಯ ಇಲಾಖೆಯವರು ಅಗೋಳಿಬೈಲು ಸಮೀಪ ದರ್ಕಾಸು ಬಳಿ ಚಿರತೆ ಹಿಡಿಯಲು ಬೋನು ಇಟ್ಟಿದ್ದಾರೆ. ಚಿರತೆ ಪದವು ಮುಟ್ಲುಪಾಡಿ ರಸ್ತೆಯಲ್ಲಿ ಓಡಾಡುತ್ತಿರುವುದನ್ನು ಸ್ಥಳೀಯರೊಬ್ಬರು ನೋಡಿದ್ದಾರೆ.
ಈ ರಸ್ತೆಯಲ್ಲಿ ಶಾಲಾ ಕಾಲೇಜುಗಳಿಗೆ ಕಾಲ್ನಡಿಗೆಯಲ್ಲಿ ಹೋಗುವ ವಿದ್ಯಾರ್ಥಿಗಳು, ವಿವಿಧ ಸ್ಥಳಗಳಿಗೆ ಕೆಲಸಕ್ಕೆ ಹೋಗುವ ನಾಗರಿಕರು, ವಾಹನ ಸವಾರರು ಭಯಭೀತರಾಗಿದ್ದು, ಗ್ರಾ.ಪಂ. ಆಡಳಿತ ಮತ್ತು ಅರಣ್ಯ ಇಲಾಖೆ ಸಮಸ್ಯೆಗೆ ತುರ್ತು ಪರಿಹಾರ ಒದಗಿಸಬೇಕಾಗಿದೆ.
Kshetra Samachara
01/10/2022 02:03 pm