ಉಡುಪಿ: ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪ್ರಭಾವದಿಂದಾಗಿ ಉಡುಪಿಯಲ್ಲಿ ಸೋಮವಾರ ರಾತ್ರಿಯಿಂದ ಭಾರೀ ಮಳೆಯಾಗುತ್ತಿದೆ.ಉಡುಪಿಯಲ್ಲಿಕಳೆದ ರಾತ್ರಿ ಪ್ರಾರಂಭಗೊಂಡ ಮಳೆ ಈಗ ಬಿರುಸು ಪಡೆದುಕೊಂಡಿದ್ದು, ಜಿಲ್ಲೆಯಲ್ಲಿಕಾರ್ಮೋಡ ಮುಸುಕಿದ ವಾತಾವರಣ ನೆಲೆಸಿದೆ.ಎರಡು ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು,ಪ್ರವಾಸಿಗರು ಹಾಗೂ ಮೀನುಗಾರರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ.ಉಡುಪಿ ತಾಲೂಕಿನಲ್ಲಿ ಮಳೆಯ ತೀವ್ರತೆ ಜೋರಾಗಿದ್ದರೂ ಕುಂದಾಪುರ- ಕಾರ್ಕಳ ತಾಲೂಕಿನಲ್ಲಿ ಸಾಧಾರಣ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಇಂದು ಮತ್ತು ನಾಳೆ ಇದೇ ರೀತಿ ಮಳೆಯಾಗಲಿದೆ.
Kshetra Samachara
13/10/2020 10:09 am