ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿರುಸಿನ ಗಾಳಿ, ಮಳೆ ಮುಂದುವರಿದಿದ್ಧು ಜನಜೀವನ ಅಸ್ತವ್ಯಸ್ತವಾಗಿದೆ. ನಗರದ ಕೊಟ್ಟಾರ ಚೌಕಿ ಬಳಿಯ ಮಾಲೇಮಾರ್ ನಲ್ಲಿ ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುತ್ತಿದ್ದಾರೆ. ರಸ್ತೆಯಲ್ಲಿ ನೀರು ಹರಿಯುತ್ತಿದ್ದು, ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ನಿನ್ನೆ ರಾತ್ರಿಯೂ ಭಾರಿ ಮಳೆಯಾಗಿದೆ.
ಜಿಲ್ಲೆಯ ಹಲವು ಕಡೆ ತಗ್ಗು ಪ್ರದೇಶಗಳು ಜಲಾವೃತವಾಗಿದೆ, ಹಳ್ಳ ,ಕೊಳ್ಳಗಳು ತುಂಬಿ ಹರಿಯುತ್ತಿದೆ. ನದಿ ತಟದಲ್ಲಿ ವಾಸಿಸುವ ಜನರು ಎಚ್ಚರದಿಂದ ಇರುವಂತೆ ಜಿಲ್ಲಾಡಳಿತ ಸೂಚಿಸಿದೆ ಹಾಗೂ ಸಮುದ್ರದಲ್ಲಿ ಜೋರು ಗಾಳಿಯಿಂದಾಗಿ ಅಲೆಗಳ ಅಬ್ಬರ ಮುಂದುವರಿದಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ವಾಯುಭಾರ ಕುಸಿತದಿಂದಾಗಿ ಇನ್ನೂ ಎರಡು ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Kshetra Samachara
14/10/2020 11:54 am