ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಕಡಲು ಪ್ರಕ್ಷುಬ್ಧ: ಮೀನುಗಾರರು , ಪ್ರವಾಸಿಗರಿಗೆ ಎಚ್ಚರಿಕೆ ಸಂದೇಶ ರವಾನೆ

ಉಡುಪಿ: ಬಂಗಾಳ ಕೊಲ್ಲಿಯಲ್ಲಿ ಎದ್ದ ಚಂಡಮಾರುತ ಪಶ್ಚಿಮ ಕರಾವಳಿ ತೀರದಲ್ಲಿ ಐದು ದಿನಗಳ ಕಾಲ ಮಳೆ ಸುರಿಸಿತ್ತು. ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಸಂಪೂರ್ಣ ಇಳಿಕೆಯಾಗಿದ್ದು , ಅರಬ್ಬೀ ಸಮುದ್ರ ಪ್ರಕ್ಷುಬ್ಧಗೊಂಡಿದೆ. ನಾಡದೋಣಿ, ಆಳಸಮುದ್ರ ಎಚ್ಚರಿಕೆಯಿಂದ ಇರಬೇಕು ಎಂದು ಉಡುಪಿ ಜಿಲ್ಲಾಡಳಿತ ಸೂಚನೆ ಹೊರಡಿಸಿದೆ. ಉಡುಪಿ ಜಿಲ್ಲೆಗೆ ಬರುವ ಪ್ರವಾಸಿಗರಿಗೂ ಜಿಲ್ಲಾಡಳಿತ ಸೂಚನೆ ನೀಡಿದ್ದು, ಸಮುದ್ರ ಪ್ರಕ್ಷುಬ್ದ ಇರುವಾಗ ಯಾರೂ ನೀರಿಗೆ ಇಳಿಯಬಾರದು. ಈಜಾಡಬಾರದು ಎಂದು ಸೂಚಿಸಿದೆ. ನೆನ್ನೆ ಬೆಂಗಳೂರಿಂದ ಬಂದಿದ್ದ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದರು. ಎಲ್ಲಾ ಚೀಚ್ ಗಳಲ್ಲಿ ಮುಳುಗು ತಜ್ಞರು, ಬೀಚ್ ಅಭಿವೃದ್ಧಿ ಸಮಿತಿಯವರು ಪ್ರವಾಸಿಗರನ್ನು ಕಡಲಿಗಿಳಿಯದಂತೆ ತಡೆದರೂ ಸಮುದ್ರಕ್ಕಿಳಿಯುತ್ತಿದ್ದಾರೆ. ಸೂಚನೆಗಳನ್ನು ಉಲ್ಲಂಘನೆ ಮಾಡುತ್ತಿದ್ದಾರೆ.

ಮಲ್ಪೆ, ಕಾಪು, ಪಡುಬಿದ್ರೆ, ಮರವಂತೆ ಬೀಚ್ ನಲ್ಲಿ ಪ್ರವಾಸಿಗರು ಬಹಳ ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ.

Edited By : Nagesh Gaonkar
Kshetra Samachara

Kshetra Samachara

19/10/2020 04:11 pm

Cinque Terre

16.81 K

Cinque Terre

1

ಸಂಬಂಧಿತ ಸುದ್ದಿ