ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: ಗೋಳ್ತಮಜಲು ಸಮೀಪ ಚಿಪ್ಪುಹಂದಿ ಪತ್ತೆ, ಅರಣ್ಯ ಇಲಾಖೆಯಿಂದ ರಕ್ಷಣೆ

ಬಂಟ್ವಾಳ: ಅಪರೂಪದ ಪ್ರಾಣಿಯೊಂದನ್ನು ಹಿಡಿದು ಸುರಕ್ಷಿತವಾಗಿ ರಕ್ಷಿತಾರಣ್ಯಕ್ಕೆ ಬಿಡುವಲ್ಲಿ ಬಂಟ್ವಾಳ ಅರಣ್ಯ ಇಲಾಖೆಯ ಸಿಬ್ಬಂದಿ ಗಳು ಯಶಸ್ವಿಯಾಗಿ ದ್ದಾರೆ.

ಬಂಟ್ವಾಳ ತಾಲೂಕಿನ ಗೋಳ್ತಮಜಲು ಗ್ರಾಮದ ಕೃಷ್ಣ ಕೋಡಿ ಎಂಬಲ್ಲಿ ಪುರುಷೋತ್ತಮ ಎಂಬವರ ಮನೆಯ ಪಕ್ಕದ ತೋಟದಲ್ಲಿ ಅಪರೂಪದ ಪ್ರಾಣಿಯಾದ ಚಿಪ್ಪುಹಂದಿ ಕಂಡು ಬಂದಿದ್ದು ಅದನ್ನು ರಕ್ಷಣೆ ಮಾಡಲಾಗಿದೆ. ಚಿಪ್ಪು ಹಂದಿ ಇರುವುದರ ಬಗ್ಗೆ ಪುರುಷೋತ್ತಮ ಅವರು ಬಂಟ್ವಾಳ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದಾರೆ. ಬಂಟ್ವಾಳ ಅರಣ್ಯ ಇಲಾಖೆ ಯ ಅಧಿಕಾರಿ ಸಹಿತ ಸಿಬ್ಬಂದಿ ಗಳು ಸ್ಥಳಕ್ಕೆ ಬೇಟಿ ನೀಡಿ ಚಿಪ್ಪು ಹಂದಿಯನ್ನು ಸುರಕ್ಷಿತವಾಗಿ ಹಿಡಿದು ಬಳಿಕ ರಕ್ಷಿತಾರಣ್ಯಕ್ಕೆ ಬಿಡುವಲ್ಲಿ ಯಶಸ್ಬಿಯಾಗಿದ್ದಾರೆ. ಈ ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ್, ಉಪವಲಯ ಅರಣ್ಯಾಧಿಕಾರಿ ಪ್ರೀತಂ ಎಸ್. ಯಶೋಧರ, ಅರಣ್ಯ ರಕ್ಷಕರಾದ ಜಿತೇಶ್ ಮತ್ತು ರೇಖಾ ಭಾಗವಹಿಸಿದ್ದರು.

Edited By : Nagesh Gaonkar
Kshetra Samachara

Kshetra Samachara

05/12/2020 05:47 pm

Cinque Terre

34.05 K

Cinque Terre

5