ಮಂಗಳೂರು: ದ.ಕ. ಜಿಲ್ಲೆಯ ವಿವಿಧೆಡೆ ಮಂಗಳವಾರ ಇಳಿಸಂಜೆಯಿಂದ ಗಾಳಿ, ಮಿಂಚು, ಸಿಡಿಲು ಸಹಿತ ಭಾರೀ ಮಳೆಯಾಗಿದೆ.
ಜಿಲ್ಲೆಯ ಮಂಗಳೂರು ತಾಲೂಕಿನಲ್ಲಿ ನಗರ ಪ್ರದೇಶ ಮತ್ತು ಸುರತ್ಕಲ್ ಪ್ರದೇಶದಲ್ಲಿ ಭಾರೀ ಮಳೆಯಾಗಿದ್ದು, ಮುಕ್ಕ ಪರಿಸರದಲ್ಲಿ ಮನೆಗಳ ಹೆಂಚು ಗಾಳಿಯ ರಭಸಕ್ಕೆ ಹಾರಿರುವ ಮಾಹಿತಿ ಇದೆ.
ಅಲ್ಲದೆ, ಸುಮಾರು ಅರ್ಧ ಗಂಟೆಗೂ ಹೆಚ್ಚಿನ ಕಾಲ ಬಿರುಸಿನ ಮಳೆ ಸುರಿದಿದ್ದು, ನಗರದ ಹಲವೆಡೆ ವಾಹನ ಸಂಚಾರದಲ್ಲಿ ತೊಡಕುಂಟಾಗಿದೆ. ಕೆಲವೆಡೆ ರಸ್ತೆಯ ಇಕ್ಕೆಲದಲ್ಲಿರುವ ಮುಚ್ಚದ ಚರಂಡಿಗಳಲ್ಲಿ ಹೂಳು ತುಂಬಿಕೊಂಡಿರುವ ಪರಿಣಾಮ ಮಳೆ ನೀರು ಸರಾಗವಾಗಿ ಹರಿಯಲಾಗದೇ ರಸ್ತೆಯಲ್ಲೇ ಹರಿಯುತ್ತಿದೆ.
ಮೂಡಬಿದಿರೆ ತಾಲೂಕು ವ್ಯಾಪ್ತಿಯಲ್ಲೂ ಮಳೆ ಜೋರಾಗಿ ಸುರಿಯುತ್ತಿದೆ.
Kshetra Samachara
08/12/2020 09:28 pm