ಮಂಗಳೂರು: ದ.ಕ.ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಮುಂದುವರಿಯುತ್ತಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ನಾಳೆ ಶಾಲೆಗಳಿಗೆ ಮಾತ್ರ ರಜೆ ನೀಡಲಾಗಿದೆ.
ಮುಂಜಾಗ್ರತಾ ಕ್ರಮವಾಗಿ ನಾಳೆ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ. ಆದರೆ ಪದವಿ ಪೂರ್ವ, ಪದವಿ, ಸ್ನಾತಕೋತ್ತರ ಪದವಿ ತರಗತಿಗಳು ಎಂದಿನಂತೆ ಕಾರ್ಯಾಚರಿಸಲಿದೆ. ಎಂದು ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kshetra Samachara
10/07/2022 08:01 pm