ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೈಂದೂರು: ಸರಕಾರಿ ಶಾಲಾ ಕಟ್ಟಡ ಕುಸಿತ: ತಪ್ಪಿದ ಬಾರಿ ದೊಡ್ಡ ಅನಾಹುತ

ಬೈಂದೂರು: ಉಡುಪಿ ಜಿಲ್ಲೆ ಬೈಂದೂರು ತಾಲೂಕಿನಲ್ಲಿ ಕಳೆದ 10 ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಇದೀಗ ಜಿಲ್ಲಾಡಳಿತದಿಂದ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಬೈಂದೂರು ತಾಲೂಕಿನ ಉಪ್ಪುಂದ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಮ್ಮನವರತೋಪ್ಪಲು , ಶಾಲಾ ಕೊಠಡಿ ಮೇಲ್ಛಾವಣಿ ಸಂಪೂರ್ಣ ಕುಸಿದು ಬಿದ್ದಿದೆ. ಶಿಥಿಲಗೊಂಡಿರುವ ಈ ಕಟ್ಟಡವನ್ನು ನೆಲಸಮಗೊಳಿಸಲು ಅಧಿಕಾರಿಗಳಿಗೆ ಮೂರು ವರ್ಷದ ಹಿಂದೆ ಸೂಚನೆ ನೀಡಲಾಗಿದೆ. ಆದರೆ ಯಾವ ಅಧಿಕಾರಿಗಳು ಕೂಡ ಈ ಬಗ್ಗೆ ಕ್ರಮ ಕೈಗೊಂಡಿಲ್ಲ ಎಂದು ಪೋಷಕರು ಬೇಸರ ವ್ಯಕ್ತಪಡಿಸಿದರು. ಇರುವ ಎರಡು ಕೊಠಡಿಗಳಲ್ಲಿ 1ನೇ ತರಗತಿಯಿಂದ 5ನೇ ತರಗತಿವರೆಗೆ 60 ಮಕ್ಕಳು ಓದುತ್ತಿದ್ದಾರೆ. ಇವರಿಗೆ ಇಬ್ಬರು ಶಿಕ್ಷಕಿಯರಿದ್ದಾರೆ. ಹೊಸ ಕಟ್ಟಡ ಕಾಮಗಾರಿ ಕೂಡಲೇ ಆರಂಭಿಸಬೇಕೆಂದು ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಪೋಷಕರು ಮನವಿ ಮಾಡಿದ್ದಾರೆ.

ಶಿಕ್ಷಣಾಧಿಕಾರಿ , ನಾಗೇಶ ನಾಯ್ಕ ಇಲ್ಲಿನ ವಸ್ತುಸ್ಥಿತಿ ಪರಿಶೀಲಿಸಿ ಮಾತನಾಡಿ ಈಗಾಗಲೇ ನಮ್ಮ ಗಮನಕ್ಕೆ ಬಂದ್ದಿದ್ದು ಹೊಸ ಕಟ್ಟಡ ನಿರ್ಮಾಣಕ್ಕಾಗಿ ಅಧಿಕಾರಿಗಳು ಮತ್ತು ಶಾಸಕರ ಗಮನಕ್ಕೆ ತಂದು ಕಾರ್ಯಾರಂಭ ಮಾಡೋದಾಗಿ ಹೇಳಿದ್ದಾರೆ.

Edited By : Manjunath H D
Kshetra Samachara

Kshetra Samachara

09/07/2022 08:52 pm

Cinque Terre

10.7 K

Cinque Terre

0

ಸಂಬಂಧಿತ ಸುದ್ದಿ