ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ : ಕಿನ್ನಿಗೋಳಿ : ಎಳತ್ತೂರು ಬಳಿ ಹುಲ್ಲು ಕತ್ತರಿಸುತ್ತಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ

ಮುಲ್ಕಿ : ಕಿನ್ನಿಗೋಳಿ ಸಮೀಪದ ಎಳತ್ತೂರು ದೇವಸ್ಥಾನದ ದೇವರ ಗುಂಡಿ ಸಂಕದ ಬಳಿ ಚಿರತೆಯೊಂದು ಹುಲ್ಲು ಕತ್ತರಿಸುತ್ತಿದ್ದ ವ್ಯಕ್ತಿಯೋರ್ವರ ಮೇಲೆ ತಾಳಿ ನಡೆಸಿದ್ದು ಗಂಭೀರ ಗಾಯಗೊಂಡ ವ್ಯಕ್ತಿ ಕಟೀಲು ಬಳಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಗಾಯಗೊಂಡವರನ್ನು ಸ್ಥಳೀಯ ನಿವಾಸಿ ಲಿಗೋರಿ (58) ಎಂದು ಗುರುತಿಸಲಾಗಿದೆ. ಗಾಯಾಳು ಲಿಗೋರಿ ಹೈನುಗಾರರಾಗಿದ್ದು ದನಗಳಿಗೆ ಮೇವು ತರಲು ಹೋದಾಗ ಈ ಘಟನೆ ನಡೆದಿದ್ದು ಲಿಗೋರಿ ರವರು ಧೈರ್ಯದಿಂದ ಚಿರತೆಯನ್ನು ಎದುರಿಸಿದ್ದು ಕೂಡಲೇ ಚಿರತೆ ಸ್ಥಳದಿಂದ ಪಲಾಯನಗೈದಿದೆ.

ಚಿರತೆ ದಾಳಿಯಿಂದ ಲಿಗೋರಿರವರ ಮುಖಕ್ಕೆ, ಕೈಗೆ ಕಾಲಿಗೆ ಸ್ವಲ್ಪ ಗಾಯಗಳಾಗಿದ್ದು ಅಪಾಯದಿಂದ ಪವಾಡಸದೃಶ ಪಾರಾಗಿದ್ದಾರೆ.

ಈ ಭಾಗದಲ್ಲಿ ಕಳೆದ ವಾರದ ಹಿಂದೆ ಕೂಡ ಚಿರತೆ ಪ್ರತ್ಯಕ್ಷವಾಗಿದ್ದು ಸ್ಥಳೀಯರಾದ ಶಿವಪ್ರಸಾದ್ ಭಟ್ ಎಂಬವರು ಎಚ್ಚರಿಕೆಯಿಂದ ಇರುವಂತೆ ಮಾಹಿತಿ ನೀಡಿದ್ದರು.

Edited By : Ashok M
PublicNext

PublicNext

03/11/2024 02:38 pm

Cinque Terre

59.89 K

Cinque Terre

1

ಸಂಬಂಧಿತ ಸುದ್ದಿ