ಕುಂದಾಪುರ: ಮಹಾತ್ಮಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮೂಲಕ ಕುಂದಾಪುರ ತಾಲೂಕಿನ ಆಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸರಕಾರಿ ಸಂಯುಕ್ತ ಪ್ರೌಢ ಶಾಲೆಯಲ್ಲಿ ಪೌಷ್ಟಿಕ ತೋಟ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಆಲೂರು ಪಂಚಾಯತ್ ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಶೀಲ ಅವರು ಗಿಡಗಳನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡದರು. ಈ ಪೌಷ್ಟಿಕ ತೋಟದಲ್ಲಿ ಪೇರಳೆ, ಸಪೋಟ, ದಾಳಿಂಬೆ, ಬಾದಾಮಿ, ತೆಂಗು ಸೇರಿದಂತೆ ವಿವಿಧ ಪೌಷ್ಟಿಕ ಆಹಾರ ಒದಗಿಸುವ ಗಿಡಗಳನ್ನು ನೆಡಲಾಗಿದೆ. ಇನ್ನು ಶಾಲೆಯಲ್ಲಿ ನರೇಗಾ ಯೋಜನೆಯಡಿ ಮಳೆನೀರು ಕೊಯ್ಲು ಕಾಮಗಾರಿ ಕೂಡ ನಡೆಯುತ್ತಿದ್ದು, ಕಾಮಗಾರಿಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದರು. ಈ ಸಂದರ್ಭ ಆಲೂರು ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಜಲಜ ಶೆಟ್ಟಿ, ಉಪಾಧ್ಯಕ್ಷರಾದ ರವಿ ಶೆಟ್ಟಿ, ಕಾರ್ಯದರ್ಶಿ ರೇಣುಕಾ ಹೆಗಡೆ, ಸರಾಕಾರಿ ಸಂಯುಕ್ತ ಪ್ರೌಢಶಾಲೆ ಆಲೂರು ಇದರ ಮುಖ್ಯೋಪಾಧ್ಯಾಯರಾದ ಶಶಿಧರ್ ಶೆಟ್ಟಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
17/09/2021 06:42 pm