ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ದ.ಕ ಜಿಲ್ಲೆಯ ವೆಂಟೆಡ್ ಡ್ಯಾಂಗಳಲ್ಲಿನ ದಿಮ್ಮಿಗಳ ತೆರವಿಗೆ ಸಿಎಂ ಸೂಚನೆ

ಮಂಗಳೂರು: ಮಳೆಯಿಂದಾಗಿ ದ.ಕ ಜಿಲ್ಲೆಯ ವೆಂಟೆಡ್ ಡ್ಯಾಂಗಳಲ್ಲಿ ಸೇರಿರುವ ಮರದ ದಿಮ್ಮಿಗಳನ್ನು ತೆರವುಗೊಳಿಸಿ, ನೀರು ಸರಾಗವಾಗಿ ಹರಿಯುವಂತೆ ಕ್ರಮವಹಿಸಿಬೇಕು. ಮಳೆ ಹಾಗೂ ಪ್ರವಾಹದಿಂದ ಯಾವುದೇ ರೀತಿಯ ಅವಘಡಗಳು ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಿಎಂ ಬಸವರಾಜ ಬೊಮ್ಮಾಯಿಯವರು ‌ಜಿಲ್ಲಾಧಿಕಾರಿಯವರಿಗೆ ಸೂಚನೆ ನೀಡಿದರು.

ವಿಡಿಯೋ ಕಾನ್ಫೆರೆನ್ಸ್ ಮೂಲಕ ಮಳೆಯಿಂದ ಹಾನಿಗೊಳಗಾದ ದ.ಕ ಜಿಲ್ಲೆ ಸೇರಿದಂತೆ ರಾಜ್ಯದ 16 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಪಂ ಸಿಇಒ, ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿ, ಮಳೆ ಹಾನಿಯಿಂದ ನೊಂದವರನ್ನು ರಕ್ಷಿಸುವುದಲ್ಲದೆ ಅವರಿಗೆ ಕಾಳಜಿ ಕೇಂದ್ರದಲ್ಲಿ ಗುಣಮಟ್ಟದ ಅಹಾರ‌ ನೀಡಬೇಕು. ಸಂತ್ರಸ್ತರು ಕಾಳಜಿ ಕೇಂದ್ರಕ್ಕೆ ಬರದೆ ಸಂಬಂಧಿಕರ ಮನೆಗೆ ಹೋದಲ್ಲಿ ಅವರಿಗೆ ಡ್ರೈ ರೇಷನ್ ಕಿಟ್ ಒದಗಿಸುವಂತೆ ಸಿಎಂ ಸೂಚಿಸಿದರು.

ಮಳೆಯಿಂದ ಹಾನಿಯಾದ ರಸ್ತೆ, ಸೇತುವೆ ದುರಸ್ತಿಗೆ ಲೊಕೋಪಯೋಗಿ ಇಲಾಖೆಗೆ 500 ಕೋಟಿ ರೂ. ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ 200 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಇದನ್ನು ಸಮರ್ಪಕವಾಗಿ ಬಳಸಿಕೊಂಡು ರಸ್ತೆ ಸಂಪರ್ಕ ಕಲ್ಪಿಸಬೇಕು. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಪರ್ಕ‌ ಕಡಿತಗೊಂಡಲ್ಲಿ ಕೇಂದ್ರ ಸರ್ಕಾರದ ಎನ್.ಎಚ್.ಎ.ಐ ನತ್ತ ನೋಡದೆ ಕೂಡಲೆ ದುರಸ್ತಿಗೊಳಿಸಿ ಜನರಿಗೆ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು ಎಂದು‌ ಸಿಎಂ ಬೊಮ್ಮಾಯಿ ಹೇಳಿದರು.

Edited By : Nagaraj Tulugeri
Kshetra Samachara

Kshetra Samachara

07/08/2022 07:14 pm

Cinque Terre

4.97 K

Cinque Terre

0

ಸಂಬಂಧಿತ ಸುದ್ದಿ