ಉಡುಪಿ: ಜಿಲ್ಲೆಯ ಬೈಂದೂರು ತಾಲೂಕು ಶಿರೂರಿನ ನೆರೆ ಪೀಡಿತ ಪ್ರದೇಶವಾದ ಅಳಿವೆ ಕೋಡಿ ಪ್ರದೇಶಕ್ಕೆ ಮಂಗಳವಾರ ಬೆಳಿಗ್ಗೆ ಉಡುಪಿ ಜಿಲ್ಲಾಧಿಕಾರಿ ಡಾ. ಕೂರ್ಮಾರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭ ಸ್ಥಳೀಯ ಮೀನುಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಕೂರ್ಮಾರಾವ್ ಸಮಸ್ಯೆಗಳನ್ನು ಆಲಿಸಿದರು. ಪ್ರಕೃತಿ ವಿಕೋಪದಡಿ ಸರ್ಕಾರ ಒದಗಿಸಬಹುದಾದ ಪರಿಹಾರ ಕಾರ್ಯಗಳನ್ನು ಶೀಘ್ರ ಮಾಡುವುದಾಗಿ ಭರವಸೆ ನೀಡಿದರು.
Kshetra Samachara
09/08/2022 11:53 am