ಬ್ರಹ್ಮಾವರ: ಎರಡು ದಿನಗಳ ಹಿಂದೆ ಕುಂದಾಪುರ ತಾಲೂಕಿನಲ್ಲಿ ಚಿರತೆಯೊಂದು ಬೋನಿಗೆ ಬಿದ್ದ ಬೆನ್ನಲ್ಲೆ ಇವತ್ತು ಬ್ರಹ್ಮಾವರ ತಾಲೂಕು ವ್ಯಾಪ್ತಿಯಲ್ಲಿ ಮತ್ತೊಂದು ಚಿರತೆಯೊಂದು ಬೋನಿನಲ್ಲಿ ಸೆರೆಯಾಗಿದೆ.
ಬ್ರಹ್ಮಾವರ ತಾಲೂಕಿನ ಮಟಪಾಡಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಹೆಣ್ಣು ಚಿರತೆ ಬಿದ್ದಿದೆ. ಕೆಲವು ದಿನಗಳಿಂದ ಚಿರತೆ ಕಾಟದಿಂದ ಬೇಸತ್ತ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು. ಮನವಿ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಬೋನು ಇರಿಸಿತ್ತು.ಈ ಚಿರತೆಯುಗ್ರಾಮದ ಸಾಕು ಪ್ರಾಣಿ, ದನಗಳನ್ನ ಭಕ್ಷಿಸುವ ಮೂಲಕ ಭಯದ ವಾತಾವರಣ ಸೃಷ್ಟಿ ಮಾಡಿತ್ತು. ಕೊನೆಗೂ ಚಿರತೆ ಬೋನಿಗೊಳಗೆ ಬಂಧಿಯಾಗಿದ್ದು ಮಟಪಾಡಿ ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಗಿದೆ.
PublicNext
05/10/2022 11:58 am