ಬೈಂದೂರು: ಕುಂದಾಪುರ ತಾಲೂಕಿನ ಕುಂದಬಾರಂದಾಡಿ ಗ್ರಾಮದ ಕೋಳೂರು ಗ್ರಾಮದಲ್ಲಿ ಮಾಸ್ತಿ ಹರಿಜನ ಎಂಬುವವರ ಮನೆಯ ಬಾವಿಗೆ ಬಿದ್ದಿದ್ದ ಚಿರತೆ ಯನ್ನು ಅರಣ್ಯ ಸಿಬ್ಬಂದಿ ರಕ್ಷಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಕುಂದಾಪುರ ವಲಯದ ಅರಣ್ಯಾಧಿಕಾರಿ ಟಿ. ಕಿರಣ್ ಬಾಬು, ಉಪ ವಲಯ ಅರಣ್ಯಾಧಿಕಾರಿ ದಿಲೀಪ್ ಕುಮಾರ್, ಸುನಿಲ್ ಕುಂಬಾರ್, ಅರಣ್ಯ ರಕ್ಷಕ ಆನಂದ ಬಳೆಗಾರ, ರಮೇಶ, ಮಂಜುನಾಥ ಗಾಣಿಗ ಮತ್ತು ಗ್ರಾಮಸ್ಥರು ಪಾಲ್ಗೊಂಡಿದ್ದರು.
Kshetra Samachara
10/10/2022 08:59 pm