ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆ: ರೆಡ್ ಅಲರ್ಟ್ ಘೋಷಣೆ

ಉಡುಪಿ: ಜಿಲ್ಲೆಯಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿದೆ.

ಇದೇ ವೇಳೆ ಜಿಲ್ಲೆಯಲ್ಲಿ ಇಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಎಚ್ಚರಿಕೆ ಸಂದೇಶ ರವಾನಿಸಲಾಗಿದೆ.

ಉಡುಪಿ ನಗರ, ಹೊರವಲಯದಲ್ಲಿ ಮಧ್ಯಾಹ್ನದಿಂದ ಒಂದೇ ಸಮನೆ ಮಳೆಯಾಗುತ್ತಿದ್ದು,ನದಿ, ಸಮುದ್ರ ತೀರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ರಾತ್ರಿ ವೇಳೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮೀನುಗಾರಿಕೆಗೆ ತೆರಳದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ಭಾನುವಾರ ಮತ್ತು ಸೋಮವಾರ ಕೂಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.

Edited By : Nagesh Gaonkar
Kshetra Samachara

Kshetra Samachara

19/09/2020 07:20 pm

Cinque Terre

65.37 K

Cinque Terre

1