ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಬಾವಿಗೆ ಬಿದ್ದ ಕುರಿಗಳನ್ನು ರಕ್ಷಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿ

ಉಡುಪಿ: ಬಾವಿಗೆ ಬಿದ್ದ ಮೂರು ಕುರಿಗಳನ್ನು ಉಡುಪಿ ಅಗ್ನಿ ಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಉಡುಪಿಯ ಸರಕಾರಿ ಬಾಲಕಿಯರ ಪ್ರೌಢ ಶಾಲೆ ಬಳಿ ನಡೆದಿದೆ.

ಸರಕಾರಿ ಬಾಲಕಿಯರ ಪ್ರೌಢ ಶಾಲೆಯ ಸಮೀಪವಿರುವ ಮನೆಯೊಂದರಲ್ಲಿ‌ ಸಾಕಿದ್ದ ಮೂರು ಕುರಿಗಳು ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದವು. ಇದನ್ನು ಗಮನಿಸಿದ ಮನೆಯವರು ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.

ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿ‌ಶಾಮಕ ದಳದ‌ ಸಿಬ್ಬಂದಿ ಬಾವಿಗಿಳಿದು ಮೂರು‌ ಕುರಿಗಳನ್ನ ರಕ್ಷಣೆ ಮಾಡಿ ಮಾನವೀಯತೆ ಮೆರೆದಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

24/02/2022 06:20 pm

Cinque Terre

18.92 K

Cinque Terre

0