ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ನೆರೆಗೆ ಸಿಲುಕಿದ 200 ಜನರ ಸ್ಥಳಾಂತರ- ಸಚಿವ ಬಸವರಾಜ ಬೊಮ್ಮಾಯಿ ಟ್ವೀಟ್

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಕೆಲವು ಗ್ರಾಮಗಳು ಜಲಾವೃತಗೊಂಡಿವೆ.

ಹಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿವೆ. ಜಿಲ್ಲಾಡಳಿತ ಈ ವಿಷಯ ನನ್ನ ಗಮನಕ್ಕೆ ತಂದ ತಕ್ಷಣ ರಾಜ್ಯದ ಒಂದು SDRF ತಂಡದ ಸುಮಾರು 250 ಸದಸ್ಯರನ್ನು ತಡರಾತ್ರಿಯೇ ಸ್ಥಳಕ್ಕೆ ಕಳುಹಿಸಲು ವ್ಯವಸ್ಥೆ ಮಾಡಿದ್ದೇನೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ನೆರೆಗೆ ಸಿಲುಕಿಕೊಂಡಿದ್ದ ಸುಮಾರು 200ಕ್ಕೂ ಹೆಚ್ಚು ಜನರನ್ನು ಈಗಾಗಲೇ ಸ್ಥಳಾಂತರಿಸಲಾಗಿದೆ. SDRF ಜೊತೆಗೆ NDRF ತಂಡವೂ ಸೇರಿಕೊಳ್ಳಲಿದೆ. ಜಿಲ್ಲಾಡಳಿತಕ್ಕೆ ಎಲ್ಲಾ ಅಗತ್ಯ ಕ್ರಮಗಳನ್ನು ತಗೆದುಕೊಳ್ಳಲು ಸೂಚಿಸಲಾಗಿದೆ.

ಈ‌ ಬಗ್ಗೆ ಕಂದಾಯ ಸಚಿವರಾದ ಅಶೋಕ್ ಅವರ ಜೊತೆ ಮಾತನಾಡಿ ರಕ್ಷಣಾ ಇಲಾಖೆಯ ಒಂದು ಹೆಲಿಕಾಪ್ಟರ್ ನೀಡಲು ಕೇಳಿಕೊಂಡಿರುತ್ತೇನೆ ಎಂದು ಸಚಿವ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

Edited By : Vijay Kumar
Kshetra Samachara

Kshetra Samachara

20/09/2020 12:35 pm

Cinque Terre

17.77 K

Cinque Terre

0

ಸಂಬಂಧಿತ ಸುದ್ದಿ