ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕೈಕಂಬ ಎಂಬಲ್ಲಿ ಟಾಯ್ಲೆಟ್ ಒಳಗಡೆ ಚಿರತೆ ಮತ್ತು ನಾಯಿ ಬಂಧಿಯಾದ ಘಟನೆ ಇಂದು ಮುಂಜಾನೆ ನಡೆದಿದೆ!
ಸುಬ್ರಹ್ಮಣ್ಯ ಸಮೀಪದ ಕೈಕಂಬ ರೇಗಪ್ಪ ಎಂಬವರ ಮನೆಯ ನಾಯಿಯನ್ನು ಹಿಡಿಯಲು ನಾಯಿಯನ್ನು ಓಡಿಸಿಕೊಂಡು ಬಂದ ಚಿರತೆ ಹೆದರಿ ಓಡಿದ ನಾಯಿ ಜೊತೆಗೇ ಟಾಯ್ಲೆಟ್ ಒಳಗಡೆ ನುಗ್ಗಿದೆ.
ಚಿರತೆಯನ್ನು ಗಮನಿಸಿದ ಮನೆಯವರು ಬಾಗಿಲು ಹಾಕಿದ್ದು ಚಿರತೆ ಮತ್ತು ನಾಯಿ ಟಾಯ್ಲೆಟ್ ಒಳಗಡೆ ಬಂಧಿಯಾಗಿದೆ! ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಅರಿವಳಿಕೆ ನೀಡಿ ಚಿರತೆಯನ್ನು ಹಿಡಿಯಲಾಗುವುದು ಎಂದು ತಿಳಿದು ಬಂದಿದೆ. ಸಾರ್ವಜನಿಕರು ಸ್ಥಳದಲ್ಲಿ ಜಮಾಯಿಸಿದ್ದಾರೆ. "ಚಿರತೆಯನ್ನು ಕೆರಳಿಸದಂತೆ" ಅರಣ್ಯ ಅಧಿಕಾರಿಗಳು ವಿನಂತಿಸಿದ್ದಾರೆ.
Kshetra Samachara
03/02/2021 09:41 am