ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಡಬ: ತಾಲೂಕಿನಾದ್ಯಂತ ಜೋರು ಗಾಳಿ ಸಹಿತ ಭಾರಿ ಮಳೆ; ಹೆದ್ದಾರಿಗೆ ಅಡ್ಡ ಬಿದ್ದ ದೊಡ್ಡ ಮರ

ಕಡಬ: ಕಡಬ, ಸುಳ್ಯ ತಾಲೂಕುಗಳ ವಿವಿಧ ಕಡೆಗಳಲ್ಲಿ ಇಂದು ಸಂಜೆ ಬಳಿಕ ಭಾರಿ ಗಾಳಿ ಸಹಿತ ಮಳೆಯಾಗಿದೆ.

ಉಪ್ಪಿನಂಗಡಿ - ಕಡಬ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆ ಸಿಪಿಸಿ ಆರ್ ಐ ಬಳಿ ಹೆದ್ದಾರಿಗೆ ಅಡ್ಡವಾಗಿ ಮರವೊಂದು ಉರುಳಿ ಬಿದ್ದು ಒಂದು ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಯಿತು. ಸ್ಥಳಕ್ಕೆ ಮೆಸ್ಕಾಂ, ಅರಣ್ಯ, ಪೊಲೀಸ್ ಇಲಾಖೆ ಸಿಬ್ಬಂದಿ ಆಗಮಿಸಿ ಸ್ಥಳೀಯರ ಸಹಕಾರದೊಂದಿಗೆ ತುರ್ತು ಕಾರ್ಯಾಚರಣೆ ನಡೆಸಿ ಮರವನ್ನು ತೆರವುಗೊಳಿದರು.

ಘಟನೆಯಲ್ಲಿ ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ಹಲವು ಕಡೆಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಕಡಬ, ಸುಳ್ಯ ತಾಲೂಕಿನ ವಿವಿಧ ಕಡೆಗಳಲ್ಲಿ ಈಗಲೂ ಗಾಳಿ ಸಹಿತ ಮಳೆ ಸುರಿಯುತ್ತಿದೆ.

Edited By : Vijay Kumar
Kshetra Samachara

Kshetra Samachara

22/02/2021 09:41 pm

Cinque Terre

8.85 K

Cinque Terre

0

ಸಂಬಂಧಿತ ಸುದ್ದಿ